ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮೀನು ಹಿಡಿಯಲು ಹೋದ ವ್ಯಕ್ತಿ ನೇತ್ರಾವತಿ ನದಿಗೆ ಬಿದ್ದು ನಾಪತ್ತೆ: ಅಜಿಲಮೊಗರು ಬಳಿಯ ಕೂಟೇಲು ಸೇತುವೆ ಬಳಿ ಘಟನೆ:

ಮೀನು ಹಿಡಿಯಲು ಹೋದ ವ್ಯಕ್ತಿ ನೇತ್ರಾವತಿ ನದಿಗೆ ಬಿದ್ದು ನಾಪತ್ತೆ: ಅಜಿಲಮೊಗರು ಬಳಿಯ ಕೂಟೇಲು ಸೇತುವೆ ಬಳಿ ಘಟನೆ:

 

ಬಂಟ್ವಾಳ:ಸ್ನೇಹಿತರ ಜೊತೆ ನೇತ್ರಾವತಿ ನದಿಗೆ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ನದಿಗೆ ಬಿದ್ದು ನೀರುಪಾಲಾದ ಘಟನೆ ಇಂದು ಸಂಜೆ ನಡೆದಿದೆ. ಸುರತ್ಕಲ್ ನಿಂದ ಸರಪಾಡಿ ಸಮೀಪದ ಮಾವಿನ ಕಟ್ಟೆ ಎಂಬಲ್ಲಿಯ ನೆಂಟರ ಮನೆಗೆ ಬಂದ ವ್ಯಕ್ತಿಗಳು ಸೇರಿದಂತೆ ನಾಲ್ಕು ಮಂದಿ ಇಂದು ಸಂಜೆ ಗಾಳ ಹಾಕಿ ಮೀನು ಹಿಡಿಯಲು ಅಜಿಲಮೊಗರು ತೆಕ್ಕಾರು  ಸಮೀಪದ ಕೂಟೇಲು ಸೇತುವೆಯ ಸಮೀಪದ ಕಿಂಡಿ ಅಣೆಕಟ್ಟು ಬಳಿ ಬಂದು ಮೀನು ಹಿಡಿಯುತ್ತಿರುವ ವೇಳೆ ಮೈಕಲ್ (53) ಎಂಬವರು ಆಯ ತಪ್ಪಿ ನೇತ್ರಾವತಿ ನದಿಗೆ ಬಿದ್ದು ನಾಪತ್ತೆಯಾಗಿದ್ದಾರೆ.

 

 

 

ಅದರೆ ಭಾರೀ ಮಳೆಯಿಂದ ನದಿ ಉಕ್ಕಿ ಹರಿಯುತಿದ್ದು ದೋಣಿಯ ಮೂಲಕ ಹುಡುಕಾಟ ನಡೆಸಿದರೂ ಪ್ರಯೋಜನವಾಗಿಲ್ಲ ನಂತರ ಬಂಟ್ವಾಳ ಅಗ್ನಿಶಾಮಕ ದಳದವರು ಆಗಮಿಸಿ ಹುಡುಕಾಟ ನಡೆಸುತಿದ್ಸು ನೀರಿನ‌ ಹರಿವು ಹೆಚ್ಚಾಗಿದ್ದರಿಂದ ಹುಡುಕಾಟಕ್ಕೆ  ತೊಂದರೆಯಾಗುತ್ತಿದೆ.

ಉಪ್ಪಿನಂಗಡಿ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳದಲ್ಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!