ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸವಣಾಲು, ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಕಾರು:ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಚಾಲಕ:

ಸವಣಾಲು, ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಕಾರು:ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಚಾಲಕ:

 

 

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮನೆಯ ಮೇಲೆ ಬಿದ್ದ ಘಟನೆ ಸವಣಾಲು ರಸ್ತೆಯ ಹೆರಾಜೆ ಬಳಿ ನಡೆದಿದೆ.ಬೆಳ್ತಂಗಡಿ ಕಡೆಯಿಂದ ಸವಣಾಲು ಕಡೆ ಚಲಿಸುತಿದ್ದ ಕಾರು ನಿಯಂತ್ರಣ ತಪ್ಪಿ ಸುಮಾರು 20 ಅಡಿ ಆಳದಲ್ಲಿ ಇದ್ದ ಮನೆ ಮೇಲೆ ಬಿದ್ದಿದೆ. ಬಿದ್ದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು ಮನೆಯ ಗೋಡೆಗೂ ಹಾನಿಯಾಗಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.ಅಪಘಾತಕ್ಕೆ ಅತೀ ವೇಗವೇ ಕಾರಣ ಎಂದು ಸ್ಥಳೀಯರು ತಿಳಿಸಿದ್ದು ಹಾಲು ಕೊಂಡೊಯ್ಯುವ ಸಮಯವಾಗಿದ್ದರಿಂದ ಹಲವಾರು ಮಂದಿ ನಡೆದುಕೊಂಡು ಹೋಗುತ್ತಾರೆ ಅದರೆ ಘಟನೆ ವೇಳೆ ಯಾರು ಇಲ್ಲದಿದ್ದುದರಿಂದ ದೊಡ್ಡ ಅಪಾಯ ತಪ್ಪಿದೆ. ಕಾರು ಚಾಲಕನ ಮಾಹಿತಿ ಲಭ್ಯವಾಗಿಲ್ಲ ಸ್ಥಳೀಯರು ಗಾಯಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!