ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಟ್ಯೂಷನ್‌ನಿಂದ ಮರಳುತ್ತಿದ್ದ 10ನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ..!: ಕಾರ್ಕಳದಲ್ಲಿ ಯುವತಿಯನ್ನು ಅಪಹರಿಸಿ ಗ್ಯಾಂಗ್ ರೇಪ್..!

ಟ್ಯೂಷನ್‌ನಿಂದ ಮರಳುತ್ತಿದ್ದ 10ನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ..!: ಕಾರ್ಕಳದಲ್ಲಿ ಯುವತಿಯನ್ನು ಅಪಹರಿಸಿ ಗ್ಯಾಂಗ್ ರೇಪ್..!

ಸಾಂದರ್ಭಿಕ ಚಿತ್ರ

ದಿನಬೆಳಗಾದರೆ ಅತ್ಯಾಚಾರದ ಪ್ರಕರಣಗಳು ಬೆಳಕಿಗೆ ಬರುತ್ತಲೆ ಇದೆ. ದೆಹಲಿ ನಿರ್ಭಯಾ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆಯಾದ ಬಳಿಕ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಕಡಿಮೆಯಾಗುತ್ತವೆ ಎಂದು ಭಾವಿಸಲಾಗಿತ್ತು. ಆದರೆ ದಿನೇ ದಿನೇ ಅತ್ಯಾಚಾರ ಪ್ರಕರಣಗಳೇ ಹೆಚ್ಚಾಗುತ್ತಿದೆ. ಇಂದು 2 ಪ್ರತ್ಯೇಕ ಸಾಮೂಹಿಕ ಅತ್ಯಾಚಾರ ಪ್ರಕರಣಗಳು ದಾಖಲಾಗಿದೆ.

ಅಸ್ಸಾಂ ರಾಜ್ಯದ ನಾಗಾನ್‌ನ ಧಿಂಗ್ ಪ್ರದೇಶದಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಟ್ಯೂಷನ್ ಮುಗಿಸಿ ಮರಳುತ್ತಿದ್ದ ಬಾಲಕಿಯನ್ನು ಮೂವರು ದುಷ್ಕರ್ಮಿಗಳು ಎಳೆದೊಯ್ದು ಭಗಕ್ ಗಾನ್ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿ, ಸ್ಥಳೀಯ ಸ್ಮಶಾನದ ಬಳಿ ಬಿಟ್ಟು ಹೋಗಿದ್ದಾರೆ. ಬೆತ್ತಲಾಗಿ, ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಬಾಲಕಿಯನ್ನು ಪಾದಚಾರಿಯೊಬ್ಬರು ಗಮನಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ತಕ್ಷಣಕ್ಕೆ ಸ್ಥಳಕ್ಕೆ ಬಂದು ಸಂತ್ರಸ್ತೆಯನ್ನು ಆಸ್ಪತ್ರೆ ದಾಖಲಿಸಿ, ಪ್ರಕರಣ ದಾಖಲಿಸಿದ್ದಾರೆ.

21 ವರ್ಷದ ಹಿಂದೂ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಕಾರ್ಕಳದಲ್ಲಿ ನಡೆದಿದೆ.

ಸಂತ್ರಸ್ತ ಯುವತಿಗೆ ಅಲ್ತಾಫ್ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ. ನಂತರ ಯುವತಿಯನ್ನು ಪುಸಲಾಯಿಸಿ ಸುತ್ತಾಡಲು ಕರೆದುಕೊಂಡು ಹೋಗಿದ್ದು ಬಳಿಕ ಇಬ್ಬರು ಸ್ನೇಹಿತರನ್ನು ಕರೆಸಿ ಬಿಯರ್ ಬಾಟಲಿ ತರಿಸಿ ಆ ಬಿಯರ್‌ನಲ್ಲಿ ಮಾದಕ ವಸ್ತು ಬೆರೆಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ಕೃತ್ಯ ನಡೆಸಿದ ಬಳಿಕ ಆಕೆಯನ್ನು ಮನೆ ಸಮೀಪ ಬಿಟ್ಟು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.

ಯುವತಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿದ್ದು ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!