ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬಂದಾರಿನ ಕು.ತೇಜಸ್ವಿನಿ ಪೂಜಾರಿಗೆ 2 ಚಿನ್ನದ ಪದಕ

ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬಂದಾರಿನ ಕು.ತೇಜಸ್ವಿನಿ ಪೂಜಾರಿಗೆ 2 ಚಿನ್ನದ ಪದಕ

ಬೆಳ್ತಂಗಡಿ : ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ 2024-25ರ, 80 ಕೆ.ಜಿ. ವಿಭಾಗದ ಸೀನಿಯರ್ ಮತ್ತು ಜೂನಿಯರ್ ವಿಭಾಗದಲ್ಲಿ ಉಜಿರೆ ಎಸ್.ಡಿ.ಎಂ.ಕಾಲೇಜಿನ ವಿದ್ಯಾರ್ಥಿನಿ ಕು.ತೇಜಸ್ವಿನಿ ಅವರು ಎರಡು ಚಿನ್ನದ ಪದಕಗಳನ್ನು ಪಡೆದಿದ್ದಾರೆ.

ಬಂದಾರು ಗ್ರಾಮದ ಬೊಳ್ಜೆ ನಿವಾಸಿ ಚಿದಾನಂದ ಪೂಜಾರಿ ಮತ್ತು ಪಾರ್ವತಿ ದಂಪತಿಯ ಪುತ್ರಿಯಾಗಿರುವ ಇವರು ಈ ವರ್ಷದ ಮಧ್ಯಪ್ರದೇಶದಲ್ಲಿ ನಡೆದ ಮಹಿಳೆಯರ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದರು.

ಕು.ತೇಜಸ್ವಿನಿ ಕ್ರೀಡಾ ಸಾಧನೆ

2021ರಲ್ಲಿ ದಾವಣಗೆರೆಯಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ 2022ರಲ್ಲಿ ಉಜಿರೆಯಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ದ್ವಿತೀಯ ಸ್ಥಾನ ಮೈಸೂರಿನಲ್ಲಿ ನಡೆದ ದಸರಾ ಸಿಎಂ ಕಪ್ ನಲ್ಲಿ ದ್ವಿತೀಯ ಸ್ಥಾನ ಅರುಣಾಚಲ ಪ್ರದೇಶದಲ್ಲಿ ನಡೆದ ರಾಷ್ಟ್ರಮಟ್ಟದ ಜೂನಿಯರ್ ವಿಭಾಗದಲ್ಲಿ ಐದನೇ ಸ್ಥಾನ ಚೆನ್ನೆöÊನಲ್ಲಿ ನಡೆದ ಖೇಲೋ ಇಂಡಿಯಾ ಸ್ಪರ್ಧೆಯಲ್ಲಿ ಐದನೇ ಸ್ಥಾನ ಪಡೆದಿದ್ದಾರೆ. 2023ರಲ್ಲಿ ಕೇರಳದಲ್ಲಿ ನಡೆದ ರಾಷ್ಟ್ರಮಟ್ಟದ ಮಹಿಳೆಯರ ಖೇಲೋ ಇಂಡಿಯಾ ಸ್ಪರ್ಧೆಯಲ್ಲಿ ಆರನೇ ಸ್ಥಾನವನ್ನು ಪಡೆದಿದ್ದರು. ತಮಿಳುನಾಡಿನಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!