ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಗಂಡು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಹಣಕ್ಕಾಗಿ ಬ್ಲ್ಯಾಕ್ ಮೇಲ್ : 37 ವರ್ಷದ ವ್ಯಕ್ತಿ ಬಂಧನ

ಗಂಡು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಹಣಕ್ಕಾಗಿ ಬ್ಲ್ಯಾಕ್ ಮೇಲ್ : 37 ವರ್ಷದ ವ್ಯಕ್ತಿ ಬಂಧನ

ಸಾಂದರ್ಭಿಕ ಚಿತ್ರ

ಮೀರತ್: ಗಂಡು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಉತ್ತರ ಪ್ರದೇಶದ ಮೀರತ್‌ನ ಹಳ್ಳಿಯೊಂದರಲ್ಲಿ ಸಂಭವಿಸಿದೆ.

ಗ್ರಾಮದಲ್ಲಿ ದಿನಸಿ ಅಂಗಡಿ ನಡೆಸುತ್ತಿದ್ದ 37 ವರ್ಷದ ವ್ಯಕ್ತಿ ತನ್ನ ಅಂಗಡಿಗೆ ಬಂದ ಮಕ್ಕಳನ್ನು ಗುರಿಯಾಗಿಸಿಕೊಂಡಿದ್ದ. ಅವರಿಗೆ ಮಾದಕವಸ್ತುಗಳನ್ನು ಬೆರೆಸಿದ ಪಾನೀಯಗಳನ್ನು ನೀಡಿ ಅವರು ಮೂರ್ಛೆ ಹೋದ ಬಳಿಕ ಅವರನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದ, ಅಲ್ಲದೆ ತನ್ನ ಕೃತ್ಯವನ್ನು ಚಿತ್ರೀಕರಿಸಿ ನಂತರ ಅವರ ವೀಡಿಯೊಗಳನ್ನು ಬಳಸಿಕೊಂಡು ಮಕ್ಕಳ ಮೇಲೆ ಬೆದರಿಕೆ ಒಡ್ಡುತ್ತಿದ್ದ. ವೀಡಿಯೊಗಳನ್ನು ಬಹಿರಂಗ ಮಾಡುವುದಾಗಿ ಬೆದರಿಸಿ ಅವರಿಂದ ಹಣ ಸುಲಿಗೆ ಮಾಡುತ್ತಿದ್ದ.

ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ವೇಳೆ ಈತ ನಾಲ್ವರು ಅಪ್ರಾಪ್ತ ವಯಸ್ಕ ಬಾಲಕರ ಮೇಲೂ ಲೈಂಗಿಕ ದೌರ್ಜನ್ಯ ಎಸಗಿರುವುದು ತಿಳಿದು ಬಂದಿದೆ.

ಘಟನೆಯಿAದ ನೊಂದ ಬಾಲಕರು ಆಹಾರ ತಿನ್ನುವುದನ್ನು, ನೀರು ಕುಡಿಯುವುದನ್ನು ನಿಲ್ಲಿಸಿದ್ದಾರೆ. ಯಾರೊಂದಿಗೂ ಮಾತನಾಡುವುದಿಲ್ಲ, ಕೆಲವರು ಮನೆಯಿಂದ ಓಡಿಹೋಗಿ ಹಿಂತಿರುಗಲು ನಿರಾಕರಿಸಿದ್ದಾರೆ. ಕೆಲವು ಹುಡುಗರು ಮಾನಸಿಕವಾಗಿ ಕುಗ್ಗಿ ತಲೆನೋವು ಜಾಸ್ತಿಯಾಗಿದೆ ಎಂದು ಪೋಷಕರು ಪೊಲೀಸರಿಗೆ ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!