ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಂಗಳೂರು: ಕಾಂಗ್ರೆಸ್ ನಾಯಕ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ: 5 ರಿಂದ 6 ಜನರ ತಂಡದಿಂದ ದುಷ್ಕೃತ್ಯ: “ಆರೋಪಿಗಳನ್ನು ಬಂಧಿಸುವ ಕಾರ್ಯ ನಡೆಯುತ್ತಿದೆ": ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್

ಮಂಗಳೂರು: ಕಾಂಗ್ರೆಸ್ ನಾಯಕ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ: 5 ರಿಂದ 6 ಜನರ ತಂಡದಿಂದ ದುಷ್ಕೃತ್ಯ: “ಆರೋಪಿಗಳನ್ನು ಬಂಧಿಸುವ ಕಾರ್ಯ ನಡೆಯುತ್ತಿದೆ": ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್

ಮಂಗಳೂರು: ಕಾಂಗ್ರೆಸ್ ನಾಯಕ, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ಮನೆ ಮೇಲೆ ಆ.21ರ ರಾತ್ರಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ಮುಖ್ಯಮಂತ್ರಿಗಳ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಖಂಡಿಸಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಐವನ್ ಡಿಸೋಜ ಅವರು ರಾಜ್ಯಪಾಲರಿಗೆ ಬಾಂಗ್ಲಾ ಪ್ರಧಾನಿಗಾದ ಪರಿಸ್ಥಿತಿ ಬರಬಹುದು ಎಂಬ ಹೇಳಿಕೆ ನೀಡಿದ್ದರು. ಇದು ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದು ಈ ಬೆನ್ನಲ್ಲೆ ಅವರ ಮನೆ ಮೇಲೆ ಕಲ್ಲುತೂರಾಟ ನಡೆದಿದೆ.

ಸುಮಾರು 5 ರಿಂದ 6 ಜನರ ತಂಡ ರಾತ್ರಿ 11ರ ಸುಮಾರಿಗೆ ನಗರದ ವೆಲೆನ್ಸಿಯದಲ್ಲಿರುವ ಐವನ್ ಡಿಸೋಜಾ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಘೋಷಣೆಗಳನ್ನು ಕೂಗಿ ಬಳಿಕ ಪರಾರಿಯಾಗಿದೆ. ಆದರೆ ಈ ಘಟನೆಯ ಸಂದರ್ಭ ಐವನ್ ಡಿಸೋಜಾ ಅವರು ಮನೆಯಲ್ಲಿರದೆ ಬೆಂಗಳೂರಿನಲ್ಲಿ ಪಕ್ಷದ ಸಭೆಗೆ ತೆರಳಿದ್ದರು.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು "ರಾತ್ರಿ ಹೆಲ್ಮೆಟ್ ಹಾಕಿ ಬಂದವರು ಐವನ್ ಡಿಸೋಜ ಅವರ ಮನೆಗೆ ಕಲ್ಲು ಬಿಸಾಡಿದ್ದಾರೆ. ಆರೋಪಿಗಳನ್ನು ಬಂಧಿಸುವ ಕಾರ್ಯ ನಡೆಯುತ್ತಿದೆ" ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ. ಸದ್ಯ ಕಲ್ಲು ತೂರಾಟದಿಂದ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!