ಬಾಲಕೃಷ್ಣ ಭಟ್(83) ಅವರನ್ನು ಹತ್ಯೆ ಮಾಡಿದ ಆರೋಪಿಗಳಾದ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕಾಸರಗೋಡು ತಾಲೂಕಿನ ಕುಂಬ್ರಾಜೆ ಗ್ರಾಮದ ಒಡಬ್ಬಳ ನಿವಾಸಿಯಾಗಿರುವ ಆಳಿಯ ರಾಘವೇಂದ್ರ ಕೆಧಿಲಾಯ( 53) ಮತ್ತು ಮೊಮ್ಮಗ ಮುರುಳಿಕೃಷ್ಣ (21) ಅವರನ್ನು ಧರ್ಮಸ್ಥಳ ಪೊಲೀಸರು ಆ.24 ರಂದು ರಾತ್ರಿ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು ನ್ಯಾಯಾಧೀಶರು ನ್ಯಾಯಂಗ ಬಂಧನ ವಿಧಿಸಲಾಗಿತ್ತು. ಆ.27 ರಂದು ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಪ್ರಕರಣದ ತನಿಖಾಧಿಕಾರಿ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಹಾಜರುಪಡಿಸಿದ್ದು ಹೆಚ್ಚಿನ ತನಿಖೆಗಾಗಿ ಏಳು ದಿನಗಳ ವರೆಗೆ ಪೊಲೀಸ್ ಕಸ್ಟಡಿಗೆ ಕೇಳಿದ್ದು ನ್ಯಾಯಾಧೀಶರು 5 ದಿನ ಧರ್ಮಸ್ಥಳ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.