ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶಾಲಾ ಕೊಠಡಿಯಲ್ಲೇ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ: ಗಾಬರಿಯಿಂದ ಚೀರಾಡಿದ 5ನೇ ತರಗತಿ ಬಾಲಕಿ: ಆರೋಪಿ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲು

ಶಾಲಾ ಕೊಠಡಿಯಲ್ಲೇ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ: ಗಾಬರಿಯಿಂದ ಚೀರಾಡಿದ 5ನೇ ತರಗತಿ ಬಾಲಕಿ: ಆರೋಪಿ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲು

ಕಲಬುರಗಿ: 5ನೇ ತರಗತಿ ವಿದ್ಯಾರ್ಥಿನಿಯೋರ್ವಳ ಮೇಲೆ ಶಿಕ್ಷಕನೋರ್ವ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಆಳಂದ ತಾಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯೊಂದರ ಸಂಭವಿಸಿದೆ.

ಶಾಲೆಯಲ್ಲಿ ಬಿಸಿ ಊಟ ಮುಗಿಸಿ, ಬಾಲಕಿ ತರಗತಿಗೆ ತೆರಳಿದ್ದಂತೆ ಬಾಲಕಿಯ ಹಿಂದೆಯೇ ಹೋದ ಶಿಕ್ಷಕ, ತರಗತಿಯ ಬಾಗಿಲು ಮುಚ್ಚಿ, ಬಾಲಕಿಯಿಂದ ಕಿಟಕಿಗಳನ್ನು ಮುಚ್ಚಿಸಿ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದಾನೆ. ಇದರಿಂದ ಬಾಲಕಿ ಗಾಬರಿಗೊಂಡು ಚೀರಾಡಿದ್ದು, ಆಗ ಆತ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಬಾಲಕಿ ಪೋಷಕರಿಗೆ ತಿಳಿಸಿದ್ದು, ಪೋಷಕರು ನೇರವಾಗಿ ಶಾಲೆಗೆ ಬಂದು ಮುಖ್ಯೋಪಾಧ್ಯಯರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿ, ಜೈಲಿಗಟ್ಟಿದ್ದಾರೆ.

ಪೋಷಕರ ದೂರಿನ ಹಿನ್ನೆಲೆ ಕ್ಷೇತ್ರ ಶಿಕ್ಷಣಾಧಿಕಾರಿ ಶಾಲೆಗೆ ಭೇಟಿ ನೀಡಿ ಸಮಗ್ರ ಮಾಹಿತಿ ಕಲೆ ಹಾಕಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ವರದಿ ಸಲ್ಲಿಸಿದ್ದರು. ವರದಿ ತಲುಪಿದ ಬಳಿಕ ತಕ್ಷಣದಿಂದಲೇ ಜಾರಿಗೆ ಬರುವಂತೆ ಶಿಕ್ಷಕನನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!