ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ: ತಾಯಿ ಜೊತೆಗೆ ಊಟಕ್ಕೆ ಬಂದಿದ್ದ ಸಮೀರ್: ಕಲ್ಲಾಪು ಜಂಕ್ಷನ್‌ನಿಂದ ಅಟ್ಟಾಡಿಸಿದ 5 ಮಂದಿಯ ತಂಡ

ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ: ತಾಯಿ ಜೊತೆಗೆ ಊಟಕ್ಕೆ ಬಂದಿದ್ದ ಸಮೀರ್: ಕಲ್ಲಾಪು ಜಂಕ್ಷನ್‌ನಿಂದ ಅಟ್ಟಾಡಿಸಿದ 5 ಮಂದಿಯ ತಂಡ

ಹತ್ಯೆಯಾಗಿರುವ ಕೊಲೆ ಪ್ರಕರಣದ ಆರೋಪಿ ಸಮೀರ್

ಉಳ್ಳಾಲ : ಕೊಲೆ ಆರೋಪದಲ್ಲಿ ಜೈಲು ಪಾಲಾಗಿ ಕೆಲ ದಿನಗಳ ಹಿಂದೆ ಬಿಡುಗಡೆಯಾಗಿದ್ದ ವ್ಯಕ್ತಿಯೋರ್ವನನ್ನು ತಲವಾರಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ವಿ.ಕೆ. ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ಆ.11ರ ರಾತ್ರಿ ನಡೆದಿದೆ.

ನಿನ್ನೆ ರಾತ್ರಿ ಸುಮಾರು 10 ಗಂಟೆ ವೇಳೆಗೆ ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಎಂಬಾತ ತನ್ನ ತಾಯಿ ಜೊತೆಗೆ ಕಲ್ಲಾಪುವಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆಂದು ಬಂದಿದ್ದು ಈ ವೇಳೆ ಅವರನ್ನು ಹಿಂಬದಿಯಿಂದ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಸಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ದಾಳಿ ಮಾಡಿದೆ. ಸಮೀರ್ ತಕ್ಷಣ ಸ್ಥಳದಿಂದ ಓಡಿದ್ದು ಆತನ ಹಿಂದೆಯೆ 5 ಮಂದಿಯ ತಂಡ  ಕಲ್ಲಾಪು ಜಂಕ್ಷನ್‌ನಿಂದ   500 ಮೀಟರ್ ದೂರದಲ್ಲಿರುವ ವಿ.ಕೆ. ಫರ್ನಿಚರ್ ಹಿಂಭಾಗದವರೆಗೂ ಅಟ್ಟಾಡಿಸಿದ್ದಾರೆ. ಅಲ್ಲಿ ಸಮೀರ್ ನನ್ನು ತಲವಾರಿನಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಹತ್ಯೆಯಾದ ಸಮೀರ್ 2018 ರಲ್ಲಿ ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ 2 ನೇ ಆರೋಪಿಯಾಗಿದ್ದ. ಜೆಪ್ಪುವಿನ ಫ್ಲಾಟ್ ವೊಂದರಲ್ಲಿ ದಾವುದ್, ಸಮೀರ್, ರಿಯಾಝ್, ನಮೀರ್, ಅಬ್ದುಲ್ ಖಾದರ್, ಉಮ್ಮರ್ ನವಾಫ್, ಮೊಹಮ್ಮದ್ ನಝೀರ್, ನೌಷಾದ್, ಅಝ್ಗರ್ ಆಲಿ ಎಂಬವರು ಸೇರಿಕೊಂಡು ಟಾರ್ಗೆಟ್ ಇಲ್ಯಾಸ್ ನನ್ನು ಕೊಲೆ ಮಾಡಿದ್ದರು. ಈ ಪ್ರಕರಣ  ಸಂಬಂಧ ಜೈಲುಪಾಲಾದ ಸಮೀರ್ ಕೆಲ ದಿನಗಳ ಹಿಂದಷ್ಟೇ ಬಿಡುಗಡೆಗೊಂಡಿದ್ದ.

ಪ್ರಕರಣದ ಕುರಿತು ಉಳ್ಳಾಲ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!