ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪ್ರಧಾನಿ ಮೋದಿ ಅನಾವರಣಗೊಳಿಸಿದ್ದ ಶಿವಾಜಿ ಮಹಾರಾಜರ ಪ್ರತಿಮೆ ಕುಸಿತ..!: ಗುತ್ತಿಗೆದಾರರ ವಿರುದ್ಧ ಪ್ರಕರಣ, ತನಿಖೆಗೆ ಆದೇಶ: 8 ತಿಂಗಳ ಹಿಂದೆಯಷ್ಟೇ ಅನಾವರಣಗೊಂಡಿದ್ದ ಪ್ರತಿಮೆ

ಪ್ರಧಾನಿ ಮೋದಿ ಅನಾವರಣಗೊಳಿಸಿದ್ದ ಶಿವಾಜಿ ಮಹಾರಾಜರ ಪ್ರತಿಮೆ ಕುಸಿತ..!: ಗುತ್ತಿಗೆದಾರರ ವಿರುದ್ಧ ಪ್ರಕರಣ, ತನಿಖೆಗೆ ಆದೇಶ: 8 ತಿಂಗಳ ಹಿಂದೆಯಷ್ಟೇ ಅನಾವರಣಗೊಂಡಿದ್ದ ಪ್ರತಿಮೆ

ಮಹಾರಾಷ್ಟ್ರ: ಸಿಂಧುದುರ್ಗ ಜಿಲ್ಲೆಯ ರಾಜ್‌ಕೋಟ್‌ನಲ್ಲಿ ನಿರ್ಮಿಸಲಾಗಿದ್ದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆಗೊಂಡ 8 ತಿಂಗಳಲ್ಲಿ ಕುಸಿದು ಬಿದ್ದಿದೆ.

ಡಿಸೆಂಬರ್ 4, 2023 ರಂದು ನೌಕಾಪಡೆಯ ದಿನದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣಗೊಳಿಸಿದ್ದರು. ಆದರೆ ನಿನ್ನೆ ಮಧ್ಯಾಹ್ನ ಸುಮಾರು 1 ಗಂಟೆಗೆ ಪ್ರತಿಮೆ ಕುಸಿದು ಬಿದ್ದಿದೆ.

ಈ ಘಟನೆಯಿಂದಾಗಿ ಭಾರತೀಯ ನೌಕಾಪಡೆ ಕಳವಳ ವ್ಯಕ್ತಪಡಿಸಿದ್ದು ತನಿಖೆಗೆ ಆದೇಶಿಸಿದೆ. ಪ್ರತಿಮೆಯ ಕುಸಿತದ ಕಾರಣವನ್ನು ತಕ್ಷಣವೇ ತನಿಖೆ ಮಾಡಲು ತಂಡವನ್ನು ನಿಯೋಜಿಸಿದೆ ಮತ್ತು ಪ್ರತಿಮೆಯನ್ನು ಸರಿಪಡಿಸಲು, ಮರುಸ್ಥಾಪಿಸಲು ಕ್ರಮಗಳನ್ನು ಪ್ರಾರಂಭಿಸಿದೆ ಎಂದು ನೌಕಾಪಡೆ ಹೇಳಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!