ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ : ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ವಶಕ್ಕೆ: ತಹಶೀಲ್ದಾರ್ ಪೃಥ್ವಿ ಸಾನಿಕಂ ಮತ್ತು ತಂಡದ ಕಾರ್ಯಾಚರಣೆ

ಬೆಳ್ತಂಗಡಿ : ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ವಶಕ್ಕೆ: ತಹಶೀಲ್ದಾರ್ ಪೃಥ್ವಿ ಸಾನಿಕಂ ಮತ್ತು ತಂಡದ ಕಾರ್ಯಾಚರಣೆ

ಬೆಳ್ತಂಗಡಿ : ನದಿಗಳಿಂದ ಅಕ್ರಮವಾಗಿ ಕಳ್ಳತನ ಮಾಡಿ ಮರಳು ಸಾಗಿಸುತ್ತಿದ್ದ ಲಾರಿಗಳನ್ನು ಆ.09ರ ಬೆಳ್ಳಂಬೆಳಗ್ಗೆ ಬೆಳ್ತಂಗಡಿ ತಹಶೀಲ್ದಾರ್ ತಡೆದು ನಿಲ್ಲಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಿಂದ ಅಕ್ರಮವಾಗಿ ನದಿಗಳಿಂದ ಮರಳು ಕದ್ದು ತುಂಬಿಸಿಕೊಂಡು ಕಕ್ಕಿಂಜೆ ಕಡೆ ಸಾಗುತ್ತಿದ್ದ ಒಂದು ಲಾರಿ ಹಾಗೂ ಒಂದು ಟೆಂಪೋವನ್ನು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮತ್ತು ತಂಡ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದು, ಬಳಿಕ ಧರ್ಮಸ್ಥಳ ಪೊಲೀಸರ ವಶಕ್ಕೆ ನೀಡಿದ್ದಾರೆ.

ಈ ಅಕ್ರಮ ಮರಳು ಸಾಗಾಟದ ಎರಡು ಲಾರಿಗಳ ಮತ್ತು ಮರಳಿನ ಬಗ್ಗೆ ಕ್ರಮ ಕೈಗೊಳ್ಳಲು ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಬೆಳ್ತಂಗಡಿ ತಹಶೀಲ್ದಾರ್ ವರದಿ ಸಲ್ಲಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!