ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಂಗಳೂರು: ಬಸ್ ಚಲಾಯಿಸುತ್ತಿರುವಾಗಲೇ ಚಾಲಕನಿಗೆ ಶುಗರ್ ಲೋ..!: ಆಟೋ ಮತ್ತು ಕಾರಿಗೆ ಬಸ್ ಡಿಕ್ಕಿ..!

ಮಂಗಳೂರು: ಬಸ್ ಚಲಾಯಿಸುತ್ತಿರುವಾಗಲೇ ಚಾಲಕನಿಗೆ ಶುಗರ್ ಲೋ..!: ಆಟೋ ಮತ್ತು ಕಾರಿಗೆ ಬಸ್ ಡಿಕ್ಕಿ..!

ಮಂಗಳೂರು: ಬಸ್ ಚಲಾಯಿಸುತ್ತಿರುವಾಗಲೇ ಚಾಲಕನಿಗೆ ಶುಗರ್ ಲೋ ಆಗಿ ಕುಸಿದು ಬಿದ್ದ ಪರಿಣಾಮ ಬಸ್ ಮುಂಭಾಗದಲ್ಲಿ ಬರುತ್ತಿದ್ದ ಆಟೋ ಮತ್ತು ಕಾರಿಗೆ ಡಿಕ್ಕಿಯಾದ ಘಟನೆ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ಆ.29ರಂದು ಸಂಭವಿಸಿದೆ.

ಪಿಟಿಸಿ ಎಂಬ ಖಾಸಗಿ ಬಸ್ ಗುರುವಾರ ಮಧ್ಯಾಹ್ನ ಸ್ಟೇಟ್ ಬ್ಯಾಂಕ್ ಕಡೆಗೆ ಸಂಚರಿಸುತ್ತಿತ್ತು. ಇನ್ನೇನು ಸಿಗ್ನಲ್ ತಲುಪುತ್ತಿರುವಾಗಲೇ ಬಸ್ ಚಾಲಕ ಪೌಲ್ ಕಿರಣ್ ಲೋಬೊ (46) ದೇಹದಲ್ಲಿ ಸಕ್ಕರೆ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಕುಸಿದು ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಬಸ್ ನಿಧಾನ ಗತಿಯಲ್ಲಿದ್ದ ಕಾರಣ ಆಟೋ ಮತ್ತು ಕಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಕಾರು ಹಾಗೂ ಬಸ್ ಮಧ್ಯೆ ಸಿಲುಕಿದ ಆಟೋ ಅಪ್ಪಚ್ಚಿಯಾಗಿದೆ.  ಅದೃಷ್ಟವಶಾತ್ ಆಟೋ ಚಾಲಕ ಉಸ್ಮಾನ್ ಮತ್ತು ಆತನ ಪತ್ನಿ, ಮಗು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಕ್ಷಣ ಬಸ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಂಗಳೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಘಟನೆಯಲ್ಲಿ ಕಾರು ಮತ್ತು ದ್ವಿಚಕ್ರ ವಾಹನಕ್ಕೂ ಹಾನಿಯಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!