ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದೇಶಾದ್ಯಂತ ಭಾರಿ ಮಳೆ..!: ಶಿಮ್ಲಾದಲ್ಲಿ ಮೇಘಸ್ಫೋಟ: ದೆಹಲಿಯಲ್ಲೂ ಹೆಚ್ಚಾದ ವರುಣನ ಆರ್ಭಟ..!

ದೇಶಾದ್ಯಂತ ಭಾರಿ ಮಳೆ..!: ಶಿಮ್ಲಾದಲ್ಲಿ ಮೇಘಸ್ಫೋಟ: ದೆಹಲಿಯಲ್ಲೂ ಹೆಚ್ಚಾದ ವರುಣನ ಆರ್ಭಟ..!

ಹಿಮಾಚಲ ಪ್ರದೇಶ: ದೇಶಾದ್ಯಂತ ವಿಪರೀತ ಮಳೆಯಾಗುತ್ತಿದ್ದು ಅಲ್ಲಲ್ಲಿ ಭಾರೀ ಅನಾಹುತಗಳು ಸಂಭವಿಸುತ್ತಿದೆ. ಶಿರೂರು ಗುಡ್ಡ ಕುಸಿತ, ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂ ಕುಸಿತದ ಬೆನ್ನಲ್ಲೆ ಶಿಮ್ಲಾದಲ್ಲಿ ಮೇಘಸ್ಫೋಟ ಉಂಟಾಗಿದೆ.

ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ 100 ಕಿಮೀ ದೂರದಲ್ಲಿರುವ ರಾಂಪುರದ ಜಕ್ರಿಯಲ್ಲಿ ಮೇಘಸ್ಫೋಟ ಉಂಟಾಗಿದೆ. ಹೀಗಾಗಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು ಈವರೆಗೆ 20 ಮಂದಿ ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.

ಶಿಮ್ಲಾ ಡಿಸಿ ಅನುಪಮ್ ಕಶ್ಯಪ್ ಮತ್ತು ಎಸ್ಪಿ ಶಿಮ್ಲಾ ಸಂಜೀವ್ ಗಾಂಧಿ ಸ್ಥಳಕ್ಕೆ ತೆರಳಿದ್ದು ಎನ್‌ಡಿಆರ್‌ಎಫ್ ತಂಡಗಳನ್ನೂ ಸ್ಥಳಕ್ಕೆ ಕಳುಹಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ಎನ್‌ಡಿಎಸ್‌ಆರ್‌ಎಫ್ ತಂಡ, ಪೊಲೀಸರು ಮತ್ತು ರಕ್ಷಣಾ ತಂಡ ಘಟನಾ ಸ್ಥಳಕ್ಕೆ ತೆರಳಿದೆ. ಆಂಬ್ಯುಲೆನ್ಸ್ ಸೇರಿದಂತೆ ಎಲ್ಲ ಮೂಲ ಸೌಕರ್ಯಗಳನ್ನು ರಕ್ಷಣಾ ಕಾರ್ಯಾಚರಣೆಗೆ ಒಳಪಡಿಸಲಾಗಿದೆ.

ಕರ್ನಾಟಕ ಹಾಗೂ ದೆಹಲಿಯಲ್ಲೂ ಕೂಡ ವರುಣನ ಆರ್ಭಟ ಜೋರಾಗಿ ಹಲವೆಡೆ ಭಾರಿ ಅನಾಹುಗಳನ್ನೇ ಸೃಷ್ಟಿ ಮಾಡಿವೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!