ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು..!

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು..!

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ಅವರು ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿಯವರನ್ನು ಕುರಿತು ಅವಮಾನದ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂದು ಆರೋಪಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಮ್ ನಾಗೇಶ್ ಕುಮಾರ್ ಗೌಡ ಮತ್ತು ಸಿಪಿಐಎಮ್ ಮುಖಂಡ ಬಿ.ಎಮ್ ಭಾರತೀಯ ಅವರು ಆ.16ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದರು.

ಆ.15ರಂದು ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಸ್ವಾತಂತ್ರೋತ್ಸವದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸದರಿ ಕಾರ್ಯಕ್ರಮದಲ್ಲಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅಧ್ಯಕ್ಷ ನೆಲೆಯಲ್ಲಿ ಮಾತನಾಡುತ್ತಾ ‘ಈ ದೇಶಕ್ಕೆ ಕೇವಲ ಶಾಂತಿಯಿಂದ, ಕೇವಲ ಚರಕ ತಿರುಗಿಸಿದರಿಂದ ಸ್ವಾತಂತ್ರ‍್ಯ  ಬಂದಿಲ್ಲ' ಎಂದಿದ್ದಾರೆ.

ಸರ್ಕಾರಿ ಅಧಿಕೃತ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿಯ ಕುರಿತು ಅವಮಾನದ ರೀತಿಯಲ್ಲಿ ಭಾಷಣ ಮಾಡಿರುವುದು ಮತ್ತು ಸಮಾಜದಲ್ಲಿ ಹಿಂದೂ ಮುಸ್ಲಿಂ ಸಮುದಾಯದವರಲ್ಲಿ ಕಂದಕವನ್ನು ಸೃಷ್ಟಿ ಮಾಡಿ ಸಮಾಜದ ನೆಮ್ಮದಿ ಮತ್ತು ಶಾಂತಿಯನ್ನು ಕದಡುವಂತೆ ಪ್ರೇರೇಪಿಸಿದ ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೆಡಿ, ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಸೆಬಾಸ್ಟಿಯನ್, ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಮಾಲಾಡಿ, ಗ್ರಾಮ ಪಂಚಾಯತ್ ಸದಸ್ಯರಾದ ರವೀಂದ್ರ ಅಮೀನ್, ಹಾಗೂ ಪಕ್ಷದ ಪ್ರಮುಖರಾದ ಸದಾನಂದ ನಾಲ್ಕೂರು ಜೊತೆಗಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!