ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕಾರ್ಕಳ: ಡ್ರಗ್ಸ್ ನೀಡಿ ಅತ್ಯಾಚಾರ ಪ್ರಕರಣ: ಬಿಜೆಪಿ ಕಾರ್ಯಕರ್ತ ಅರೆಸ್ಟ್: ಅಲ್ತಾಫ್ ತಪ್ಪಿಸಿಕೊಳ್ಳಲು ಅಭಯ್ ಸಪೋರ್ಟ್: ಡ್ರಗ್ಸ್ ವಿರೋಧಿ ಅಭಿಯಾನದಲ್ಲಿ ಇದ್ದವನೇ ಡ್ರಗ್ಸ್ ಪೂರೈಸಿದ್ದ..!

ಕಾರ್ಕಳ: ಡ್ರಗ್ಸ್ ನೀಡಿ ಅತ್ಯಾಚಾರ ಪ್ರಕರಣ: ಬಿಜೆಪಿ ಕಾರ್ಯಕರ್ತ ಅರೆಸ್ಟ್: ಅಲ್ತಾಫ್ ತಪ್ಪಿಸಿಕೊಳ್ಳಲು ಅಭಯ್ ಸಪೋರ್ಟ್: ಡ್ರಗ್ಸ್ ವಿರೋಧಿ ಅಭಿಯಾನದಲ್ಲಿ ಇದ್ದವನೇ ಡ್ರಗ್ಸ್ ಪೂರೈಸಿದ್ದ..!

ಕಾರ್ಕಳ: ಯುವತಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಆರೋಪಿ ಅಲ್ತಾಫ್ ವಿರುದ್ಧ ಭಾರೀ ಆಕ್ರೋಶ ಕೇಳಿ ಬರುತ್ತಿದ್ದು ಕಠಿಣ ಶಿಕ್ಷೆ ನೀಡುವಂತೆ ಹಿಂದೂ ಸಂಘಟನೆಗಳು ಒತ್ತಾಯಿಸುತ್ತಿವೆ. ಈ ಮಧ್ಯೆ ಪ್ರಕರಣದ ಮೂರನೆ ಆರೋಪಿಯಾಗಿ ಬಿಜೆಪಿ ಕಾರ್ಯಕರ್ತ ಅಭಯ್ ಅರೆಸ್ಟ್ ಆಗಿದ್ದಾನೆ.

ಬಂಧಿತ ಆರೋಪಿ ಅಭಯ್ ಫೇಸ್‌ಬುಕ್‌ನಲ್ಲಿ ಶಾಸಕ ಸುನೀಲ್‌ಕುಮಾರ್ ಅವರ ಫೋಟೋ ಹಾಕಿಕೊಂಡಿರುವುದು ಅಷ್ಟೇ ಅಲ್ಲದೆ ಬಿಜೆಪಿ, ಬಜರಂಗದಳದಲ್ಲಿ ಗುರುತಿಸಿಕೊಂಡಿದ್ದು ಸಾಕಷ್ಟು ಸಂಚಲನ ಸೃಷ್ಟಿಸುತ್ತಿದೆ. ಅತ್ಯಾಚಾರ ಎಸಗಿದ ನಂತರ ಕ್ರಿಮಿನಲ್ ಅಲ್ತಾಫ್ ತಪ್ಪಿಸಿಕೊಳ್ಳಲು ಅಭಯ್ ಸಹಕರಿಸಿದ್ದ ಜೊತೆಗೆ ಅಭಯ್ ಅಲ್ತಾಫ್‌ಗೆ ಡ್ರಗ್ಸ್ ತಂದು ಕೊಟ್ಟಿದ್ದ ಎಂದು ತಿಳಿದುಬಂದಿದೆ. ಈ ಹಿನ್ನಲೆ ಎನ್‌ಡಿಪಿಎಸ್ ಕಾಯ್ದೆಯಡಿ ಅಭಯ್‌ನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.

ಕಳೆದ ತಿಂಗಳು ಬಜರಂಗದಳ ಡ್ರಗ್ಸ್ ವಿರೋಧಿ ಅಭಿಯಾನ ನಡೆಸಿತ್ತು. ಈ ಡ್ರಗ್ಸ್ ವಿರೋಧಿ ಅಭಿಯಾನದಲ್ಲಿ ಅಭಯ್ ಕೂಡ ಭಾಗಿಯಾಗಿದ್ದ. ಡ್ರಗ್ಸ್ ಮಾರಾಟದ ವಿರುದ್ಧ ಸಿಡಿದೆದ್ದಿದ್ದ. ಕಾರ್ಕಳ ಡಿವೈಎಸ್ ಪಿ ಗೆ ಮನವಿ ನೀಡುವ ಸಮಯದಲ್ಲಿಯೂ ಆತ ಜೊತೆಗಿದ್ದ. ಆದರೆ ಆತನೇ ಅತ್ಯಾಚಾರಿ ಅಲ್ತಾಫ್‌ಗೆ ಡ್ರಗ್ಸ್ ತಂದು ಕೊಟ್ಟಿರುವುದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಈ ಘಟನೆ ನಡೆದ ಬೆನ್ನಲ್ಲೆ ಸಂತ್ರಸ್ತ ಯುವತಿ ಹಿಂದೂವಾಗಿದ್ದು ಆರೋಪಿ ಮುಸ್ಲಿಂ ಆಗಿದ್ದ ಕಾರಣ ಕೇಸನ್ನು ಲವ್ ಜಿಹಾದ್ ಎಂದು ಆರೋಪಿಸಲಾಗಿತ್ತು. ಆದರೆ ಅಭಯ್ ಬಂಧನವಾದ ಬೆನ್ನಲ್ಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಂತಾಗಿದೆ. ಪ್ರಮುಖ ಆರೋಪಿ ಅಲ್ತಾಫ್ ಪರ ಯಾವುದೇ ವಕೀಲರು ವಾದಿಸಬಾರದು, ಆತನಿಗೆ ಬಹಿಷ್ಕಾರ ಹಾಕಬೇಕೆಂದು ಮುಸ್ಲಿಂ ಮುಖಂಡರು ತೀರ್ಮಾನಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!