ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕಾಶಿಬೆಟ್ಟು: ಅವ್ಯವಸ್ಥಿತ ರಾ.ಹೆದ್ದಾರಿ ಕಾಮಗಾರಿಯಿಂದ ನಿರಂತರ ಸಮಸ್ಯೆ: ‘ನಮಗೂ ಬದುಕುವ ಹಕ್ಕಿದೆ ಅದನ್ನು ಕಸಿದುಕೊಳ್ಳಬೇಡಿ’: ಕಾಶಿಬೆಟ್ಟು ಕೈಗಾರಿಕಾ ವಸಾಹತಿನ ಉದ್ಯಮಿಗಳ ಆಕ್ರೋಶ

ಕಾಶಿಬೆಟ್ಟು: ಅವ್ಯವಸ್ಥಿತ ರಾ.ಹೆದ್ದಾರಿ ಕಾಮಗಾರಿಯಿಂದ ನಿರಂತರ ಸಮಸ್ಯೆ: ‘ನಮಗೂ ಬದುಕುವ ಹಕ್ಕಿದೆ ಅದನ್ನು ಕಸಿದುಕೊಳ್ಳಬೇಡಿ’: ಕಾಶಿಬೆಟ್ಟು ಕೈಗಾರಿಕಾ ವಸಾಹತಿನ ಉದ್ಯಮಿಗಳ ಆಕ್ರೋಶ

ಬೆಳ್ತಂಗಡಿ: ಲಾಯಿಲ ಕಾಶಿಬೆಟ್ಟುವಿನಲ್ಲಿ ಅವ್ಯವಸ್ಥಿತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ನಿರಂತರ ಸಮಸ್ಯೆಗಳನ್ನು ಎದುರಿಸುತ್ತಿರುವ ಕೈಗಾರಿಕಾ ವಸಾಹತಿನ ಉದ್ಯಮಿಗಳು ಆ.09ರಂದು ಹೆದ್ದಾರಿಯ ಬದಿಯಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಕೈಗಾರಿಕಾ ವಸಾಹತು ಉಳಿಸಿ ಸಮಿತಿಯ ಸಂಚಾಲಕ ಪ್ರಶಾಂತ್ ಅವರು 'ಪುಂಜಾಲಕಟ್ಟೆ – ಚಾರ್ಮಾಡಿ ಹೆದ್ದಾರಿ ಕಾಮಗಾರಿ ಆರಂಭವಾದಗಿಂದ ನಾವು ಸಮಸ್ಯೆ ಎದುರಿಸುತ್ತಿದ್ದೇವೆ. ಕಳೆದ ನಾಲ್ಕು ತಿಂಗಳಿನಿಂದ ಇಲ್ಲಿಯ ಯಾವ ಫ್ಯಾಕ್ಟರಿಯಲ್ಲಿಯೂ ಕೆಲಸಮಾಡಲು ಸಾಧ್ಯವಾಗುತ್ತಿಲ್ಲ. ನಮಗೂ ಬದುಕುವ ಹಕ್ಕಿದೆ ಅದನ್ನು ಕಸಿದುಕೊಳ್ಳಬೇಡಿ’ ಎಂದು ಸರಕಾರ ಅಧಿಕಾರಿಗಳನ್ನು ಕೇಳಿಕೊಂಡಿದ್ದಾರೆ.

‘ಹೆದ್ದಾರಿಯ ಅಗಲೀಕರಣಕ್ಕಾಗಿ ಕೈಗಾರಿಕಾ ವಸಾಹತುವಿಗೆ ಹೋಗುವ ರಸ್ತೆ ಸಂಪರ್ಕ ಕಡಿತಗೊಳಿಸಿದ್ದಾರೆ. ಅದನ್ನು ಸರಿಪಡಿಸಿಕೊಡುವಂತೆ ಹಾಗೂ ಮಳೆಯ ಸಂದರ್ಭ ಕೆಸರು ನೀರು ನುಗ್ಗದಂತೆ ಕ್ರಮ ಕೈಗೊಳ್ಳುವಂತೆ ಕಳೆದ ಹಲವು ತಿಂಗಳಿಂದ ವಿನಂತಿಸುತ್ತಿದ್ದೇವೆ. ಆದರೆ ಶಾಸಕರು, ಅಧಿಕಾರಿಗಳು ಯಾರೂ ಸ್ಪಂದಿಸುತ್ತಿಲ್ಲ. ಹೀಗಾಗಿ ಸರಕಾರದ ಅಧಿಕಾರಿಗಳ ಗಮನ ಸೆಳೆಯಲು ಸಾಂಕೇತಿಕವಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ. ಈ ವ್ಯವಸ್ಥೆ ಸರಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ಹೆದ್ದಾರಿ ಬಂದ್ ಮಾಡಿ ಹೋರಾಟ ನಡೆಸಬೇಕಾಗಬಹುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬೆಳ್ತಂಗಡಿ ತಾಲೂಕು ಪಂಚಾಯತು ಕಾರ್ಯನಿರ್ವಹಣಾ ಅಧಿಕಾರಿ ಭವನಿ ಶಂಕರ್ ಅವರು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ, ತಾತ್ಕಾಲಿಕವಾಗಿ ಕೈಗಾರಿಕಾ ವಸಾಹತುವಿನ ಒಳಗಿರುವ ಚರಂಡಿಗಳನ್ನು ಸರಿಪಡಿಸಲು ಲಾಯಿಲ ಗ್ರಾ.ಪಂ ಅಧಿಕಾರಿಗಳಿಗೆ ಸೂಚಿಸಿದರು. ಹಾಗೂ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಕಾಣುವ ನಿಟ್ಟಿನಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದರು. ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು. ಸಾಂಕೇತಿಕ ಪ್ರತಿಭಟನೆಯಲ್ಲಿ ಉದ್ಯಮಿ ವೆಂಕಟ್ರಮಣ ಭಟ್, ಮುಷ್ತಾಕ್ ಅಹಮ್ಮದ್, ಸಾಮಾಜಿಕ ಹೋರಾಟಗಾರ ಶೇಖರ ಲಾಯಿಲ ಹಾಗೂ ಇತರರು ಭಾಗವಹಿಸಿದ್ದರು.

ರಸ್ತೆಯಲ್ಲಿ ನಿರ್ಮಾಣವಾಗಿರುವ ದೊಡ್ಡ ಹೊಂಡಗಳಿಗೆ ವಾಹನಗಳು ಬಿದ್ದು ಮೇಲೇಳುತ್ತಿರುವ ದುಸ್ಥಿತಿ ಕಂಡ ಪ್ರತಿಭಟನಾಕಾರರು ಹೊಂಡಕ್ಕೆ ಕಲ್ಲುಗಳನ್ನು ಹಾಕಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!