ಈ ಸ್ಪರ್ಧೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಪೂಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ತಂಡ ರಾಷ್ಟ್ರೀಯ ಜನಪದ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆಯುವುದರೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ಪಾತ್ರಾಭಿನಯ ಸ್ಪರ್ಧಿಯಲ್ಲಿ ಭಾಗವಹಿಸಿದ ತಂಡ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಈ ವಿಜೇತ ತಂಡಕ್ಕೆ ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಸಂಪನ್ಮೂಲ ಕೇಂದ್ರದ ಪ್ರಭಾರ ಸಮನ್ವಯಾಧಿಕಾರಿ ಮೋಹನ್ ಕುಮಾರ್ ಅವರು ಪ್ರಮಾಣ ಪತ್ರ ನೀಡಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆಯ ಸ್ಪರ್ಧೆಯ ತಾಲೂಕು ನೋಡಲ ಅಧಿಕಾರಿ ಮತ್ತು ಶಿಕ್ಷಣ ಸಂಯೋಜಕರು ಆಗಿರುವ ಸಿದ್ದಲಿಂಗಯ್ಯ ಹಾಗೂ ಶ್ರೀಮತಿ ಚೇತನಾಕ್ಷಿ, ಪುಂಜಾಲಕಟ್ಟೆಯ ಸಹ ಶಿಕ್ಷಕರಾದ ಧರಣೇಂದ್ರ ಕೆ , ಚಿತ್ರಕಲಾ ಶಿಕ್ಷಕರಾದ ಬಿ.ಎಸ್ ಬಿರಾದಾರ್, ಅತಿಥಿ ಶಿಕ್ಷಕರಾದ ಶ್ರೀಮತಿ ಜಯಶ್ರೀ, ವೇಣೂರು ಶಾಲಾ ಶಿಕ್ಷಕ ಬಳಗ ಮತ್ತು ಗಣ್ಯರು ಉಪಸ್ಥಿತರಿದ್ದರು.
ವಿಜೇತ ತಂಡಕ್ಕೆ ಪೂಂಜಾಲಕಟ್ಟೆ ಸಂಸ್ಥೆಯ ಉಪ ಪ್ರಾಂಶುಪಾಲರಾದ ಉದಯಕುಮಾರ್.ಬಿ ಯವರು ಅಭಿನಂದನೆ ಸಲ್ಲಿಸಿದ್ದಾರೆ.