ಕಲ್ಮಂಜ ಗ್ರಾಮದ ಗುತ್ತು ಬೈಲು ಎಂಬಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಗೆ ಕಿರು ಸೇತುವೆಯೊಂದು ಸಂಪೂರ್ಣ ಕೊಚ್ಚಿ ಹೋಗಿ ಸಂಪರ್ಕ ಕಡಿತಗೊಂಡಿತ್ತು. ಈ ವಿಷಯವನ್ನು ಶಾಸಕರ ಗಮನಕ್ಕೆ ತಂದಾಗ ಮಳೆ ಸ್ವಲ್ಪ ಕಡಿಮೆಯಾದಲ್ಲಿ ತಕ್ಷಣ ತಾತ್ಕಾಲಿಕವಾಗಿ ಸಂಪರ್ಕ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು ಎಂಬ ಭರವಸೆಯನ್ನು ಸ್ಥಳೀಯರಿಗೆ ನೀಡಿದ್ದರು.ಅದರಂತೆ ಎರಡು ದಿನಗಳಿಂದ ಮಳೆ ಕಡಿಮೆಯಾಗಿದ್ದು ಇವತ್ತು ತಾತ್ಕಾಲಿಕ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದ್ದಾರೆ.
ತಕ್ಷಣ ಸ್ಪಂದಿಸಿದ ಶಾಸಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದ್ದು ಸರಕಾರದಿಂದ ಯಾವುದೇ ನೆರವು ಬಾರದಿರುವುದರಿಂದ ಕಂಗೆಟ್ಟಿದ್ದ ಕಲ್ಮಂಜ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.