ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ರಾಷ್ಟ್ರೀಯ ಹೆದ್ದಾರಿ ಗುತ್ತಿಗೆದಾರ ಡಿ.ಪಿ.ಜೈನ್ ಕಂಪನಿ‌ ಕಾರ್ಮಿಕ ಆತ್ಮಹತ್ಯೆ ಯತ್ನ:

ರಾಷ್ಟ್ರೀಯ ಹೆದ್ದಾರಿ ಗುತ್ತಿಗೆದಾರ ಡಿ.ಪಿ.ಜೈನ್ ಕಂಪನಿ‌ ಕಾರ್ಮಿಕ ಆತ್ಮಹತ್ಯೆ ಯತ್ನ:

 

 

 

 

 

ಬೆಳ್ತಂಗಡಿ: ಪುಂಜಾಲಕಟ್ಟೆ ಚಾರ್ಮಾಡಿ   ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ಗುತ್ತಿಗೆದಾರ ಡಿ.ಪಿ ಜೈನ್ ಕಂಪನಿಯ ಕಾರ್ಮಿಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅ 06 ರ ಸಂಜೆ  ನಡೆದಿದೆ. ಡಿ.ಪಿ. ಜೈನ್ ಕಂಪನಿಯಲ್ಲಿ ಡ್ರೈವರ್ ಆಗಿ ಕರ್ತವ್ಯ ನಿರ್ವಹಿಸುತಿದ್ದ ನಾಗಪುರ ಮೂಲದ ಪ್ರಮೋದ್ ಜಾಡೆ (31) ಲಾರಿಯಲ್ಲಿ ಸೀಟ್ ಬೆಲ್ಟ್ ಮೂಲಕ  ಆತ್ಮಹತ್ಯೆಗೆ ಯತ್ನಿಸಿದ್ದು ತಕ್ಷಣ ಅಲ್ಲಿದ್ದ ಇತರರು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊಂಡು ಹೋಗಲು ವೈದ್ಯರು ಸೂಚಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ತಂದೆ ಸಾವನ್ನಪ್ಪಿದ್ದು ಈ ಬೇಸರದಲ್ಲಿ ಮನನೊಂದು ಆತ್ಮಹತ್ಯೆಗೆ ಯತ್ನ ನಡೆದಿದೆ ಎಂಬ  ಮಾಹಿತಿ ಇದೆ. ಅದರೆ   ಕಳೆದ ಮೂರು ತಿಂಗಳಿನಿಂದ ಕಾರ್ಮಿಕರಿಗೆ ಸಂಬಳ ನೀಡದೇ ಇದುದ್ದರಿಂದ ಅ 05 ರ ಸೋಮವಾರ ಓಡಿಲ್ನಾಳ ಡಿ.ಪಿ. ಜೈನ್ ಪ್ಲಾಂಟೇಷನ್ ನಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು. ಈ ಎಲ್ಲ ಕಾರಣಗಳಿಂದ ಆತ್ಮಹತ್ಯೆ ಯತ್ನ ಹಲವು ಅನುಮಾನಗಳಿಗೆ ಕಾರಣವಾಗಿದೆ. ಸ್ಪಷ್ಟ ಚಿತ್ರಣ ಇನ್ನಷ್ಟೇ ತನಿಖೆಯಿಂದ  ತಿಳಿದು ಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!