Home › ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿ..!: ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯ
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿ..!: ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯ
ONLINE PUDU / Friday, August 16, 2024
ಮಂಗಳೂರು: ಬೆಂಗಳೂರಿನಿಂದ ಮಂಗಳೂರಿನತ್ತ ಬರುತ್ತಿದ್ದ ಖಾಸಗಿ ಬಸ್ ಫರಂಗಿಪೇಟೆ ಸಮೀಪದ 10ನೇ ಮೈಲಿಕಲ್ಲು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಆ.16ರಂದು ಸಂಭವಿಸಿದೆ.
ಘಟನೆಯಲ್ಲಿ 10ಕ್ಕೂ ಅಧಿಕ ಪ್ರಯಾಣಿಕರು ಗಂಭಿರವಾಗಿ ಗಾಯಗೊಂಡಿದ್ದು ಸ್ಥಳೀಯರು ಸೇರಿಕೊಂಡು ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಚಾಲಕನ ಅತಿ ವೇಗದ ಚಾಲನೆ ಅಥವಾ ವಾಹನದಲ್ಲಿ ಕಂಡ ತಾಂತ್ರಿಕ ದೋಷಗಳಿಂದ ಅಪಘಾತ ಸಂಭವಿಸಿರಬಹುದು ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದು ಘಟನೆಗೆ ಸ್ಪಷ್ಟಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.