ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮನೆ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯಗೊಂಡ ವ್ಯಕ್ತಿ ಸಾವು..!

ಮನೆ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯಗೊಂಡ ವ್ಯಕ್ತಿ ಸಾವು..!

ಮೈಸೂರು: ಮನೆ ಮೇಲೆ ಕಾಡಾನೆ ದಾಳಿ ನಡೆಸಿ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಆ.28ರಂದು ಹೆಚ್.ಡಿ.ಕೋಟೆ ತಾಲೂಕಿನ ಗೋಳೂರು ಹಾಡಿಯಲ್ಲಿ ನಡೆದಿದೆ.

ಗೋಳೂರು ಹಾಡಿಯ ಕಾಳ (75) ಎಂಬವರು ತಮ್ಮ ಹಾಡಿಯ ಮನೆಯಲ್ಲಿದ್ದ ಸಂದರ್ಭದಲ್ಲಿ ಕಾಡಾನೆಯೊಂದು ದಾಳಿ ಮಾಡಿ ಮನೆಯನ್ನು ಜಖಂಗೊಳಿಸಿದೆ. ದಾಳಿ ವೇಳೆ ಕಾಳ ಅವರಿಗೆ ಗಂಭೀರ ಗಾಯಗಳಾಗಿದ್ದವು. ಬಳಿಕ ಅರಣ್ಯ ಇಲಾಖೆ ಸಹಕಾರದೊಂದಿಗೆ ಹಾಡಿಯ ಜನರು ಹೆಚ್.ಡಿ.ಕೋಟೆ ಸರ್ಕಾರಿ ಅಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ವೃದ್ಧ ಕಾಳ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು, ಅರಣ್ಯ ಇಲಾಖೆಯ ಅಧಿಕಾರಿಗಳು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಕುಟುಂಬಕ್ಕೆ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ನೀಡಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ಅಂತರಸAತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!