ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಪ್ರಾಪ್ತ ಬಾಲಕಿ ಮೇಲೆ ತಂದೆಯಿಂದಲೇ ಅತ್ಯಾಚಾರ..!: ಪತಿಯ ವಿರುದ್ಧ ದೂರು ದಾಖಲಿಸಿದ ಪತ್ನಿ: ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ಬಾಲಕಿ ಮೇಲೆ ತಂದೆಯಿಂದಲೇ ಅತ್ಯಾಚಾರ..!: ಪತಿಯ ವಿರುದ್ಧ ದೂರು ದಾಖಲಿಸಿದ ಪತ್ನಿ: ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಸಾಂದರ್ಭಿಕ ಚಿತ್ರ

ಆಂಧ್ರಪ್ರದೇಶ: ತಂಪು ಪಾನೀಯದಲ್ಲಿ ಅಮಲು ಪದಾರ್ಥ ಬೆರೆಸಿ ಕೊಟ್ಟು, ಪ್ರತಿದಿನ ತಂದೆಯೇ ಮಗಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ಆಂಧ್ರಪ್ರದೇಶದ ಮಾಚರ್ಲದಲ್ಲಿ ಬೆಳಕಿಗೆ ಬಂದಿದೆ.

ಆರೋಪಿ ಹಾಗೂ ಆತನ ಹೆಂಡತಿ ಮತ್ತು ಇಬ್ಬರು ಹೆಣ್ಣು ಮಕ್ಕಳು ಮನೆಯೊಂದರಲ್ಲಿ ವಾಸವಾಗಿದ್ದು ಎರಡು ವರ್ಷಗಳ ಹಿಂದೆಯೇ ತನ್ನ ಮೂರು ವರ್ಷದ ಮಗಳ ಜೊತೆ ಪತಿ ಅನುಚಿತವಾಗಿ ವರ್ತಿಸುತ್ತಿದ್ದುದನ್ನು ಪತ್ನಿ ಗಮನಿಸಿದ್ದಳು. ಗಂಡನ ವರ್ತನೆಯಿಂದ ಜರ್ಝರಿತಗೊಂಡಿದ್ದ ಆಕೆ, ಮಕ್ಕಳ ಜೊತೆ ತನ್ನ ತವರು ಮನೆಗೆ ಹೋಗಿದ್ದಳು. ಆದರೆ ಎರಡು ತಿಂಗಳ ಹಿಂದೆ ಹಿರಿಯರ ಸಮ್ಮುಖದಲ್ಲಿ ಪಂಚಾಯಿತಿ ನಡೆಸಿದ ಪತಿ, ತಾನು ಬದಲಾಗಿದ್ದೇನೆ. ಇನ್ನೆಂದೂ ತಪ್ಪು ಮಾಡುವುದಿಲ್ಲ ಎಂದಿದ್ದ. ಹಿರಿಯರ ಮುಂದೆ ಅವರನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ಪತ್ನಿ, ಮಕ್ಕಳನ್ನು ನಂಬಿಸಿ ಮನೆಗೆ ವಾಪಸ್ ಕರೆತಂದಿದ್ದ.

ಆದರೆ ಬದಲಾಗದ ಆತ ಪ್ರತಿ ರಾತ್ರಿ ಪತ್ನಿ ಹಾಗೂ ಮಕ್ಕಳಿಗೆ ತಂಪು ಪಾನೀಯದಲ್ಲಿ ಅಮಲು ಪದಾರ್ಥ ಬೆರೆಸಿ ಕುಡಿಯಲು ಕೊಡುತ್ತಿದ್ದ. ಅದನ್ನು ಆತ ಪ್ರೀತಿಯಿಂದ ಕೊಡುತ್ತಾನೆ ಎಂದು ನಂಬಿ ಅವರು ಕುಡಿಯುತ್ತಿದ್ದ ಅವರು ಗಾಢ ನಿದ್ರೆಗೆ ಜಾರುತ್ತಿದ್ದರು. ಎಲ್ಲರೂ ಮಲಗಿದ ನಂತರ ತಂದೆ ಪ್ರತಿದಿನ ಮಗಳ ಮೇಲೆ ಅತ್ಯಾಚಾರ ಎಸಗುತ್ತಿದ್ದ. ಬೆಳಗ್ಗೆ ಬಾಲಕಿ ಮೂತ್ರ ವಿಸರ್ಜಿಸಲು ಹೋದಾಗ ನೋವಿನಿಂದ ಅಳುತ್ತಿದ್ದದ್ದನ್ನು ಗಮನಿಸಿದ ತಾಯಿ ಅನುಮಾನಗೊಂಡು ಮಗಳನ್ನು ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಿದ್ದರು. ಆಗ ವೈದ್ಯರು ಬಾಲಕಿಯ ಮೇಲೆ ಅತ್ಯಾಚಾರವಾಗಿರುವುದಾಗಿ ತಿಳಿಸಿದ್ದಾರೆ. ಇದಕ್ಕೆ ಕಾರಣ ಪತಿಯೇ ಎಂದು ಅರಿತ ಪತ್ನಿ, ಪತಿಯ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!