ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹೆರಿಗೆ ಸುಸೂತ್ರವಾಗಿ ನಡೆಯಲಿ ಎಂದು ಪ್ರಾರ್ಥಿಸಿ ವಾಪಸ್ಸಾದ ದಂಪತಿ: ರಸ್ತೆ ಮಧ್ಯೆ ಅಪಘಾತ : ತುಂಬು ಗರ್ಭಿಣಿ ಸಾವು..!: ತಾಯಿಯ ಹೊಟ್ಟೆಯಿಂದ ಹೊರ ಬಂದ ಮಗು: ಫಲಿಸಲಿಲ್ಲವೇ ಪ್ರಾರ್ಥನೆ..?

ಹೆರಿಗೆ ಸುಸೂತ್ರವಾಗಿ ನಡೆಯಲಿ ಎಂದು ಪ್ರಾರ್ಥಿಸಿ ವಾಪಸ್ಸಾದ ದಂಪತಿ: ರಸ್ತೆ ಮಧ್ಯೆ ಅಪಘಾತ : ತುಂಬು ಗರ್ಭಿಣಿ ಸಾವು..!: ತಾಯಿಯ ಹೊಟ್ಟೆಯಿಂದ ಹೊರ ಬಂದ ಮಗು: ಫಲಿಸಲಿಲ್ಲವೇ ಪ್ರಾರ್ಥನೆ..?

ನೆಲಮಂಗಲ: ಸ್ಕೂಟರ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ತುಂಬು ಗರ್ಭಿಣಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಆ.07ರಂದು ಸಂಭವಿಸಿದೆ.

ಪುಟ್ಟ ಕಂದಮ್ಮನ ನಿರೀಕ್ಷೆಯಲ್ಲಿದ್ದ ಸಿಂಚನಾ ಹಾಗೂ ಅವರ ಪತಿ ಮಂಜುನಾಥ್ ಶಿವಗಂಗೆಯ ಗಣಪತಿ ದೇವಾಲಯಕ್ಕೆ ತೆರಳಿದ್ರು. ಸಿಂಚನಾ ಅವರು ಆಗಸ್ಟ್ 17ಕ್ಕೆ ನವಮಾಸಕ್ಕೆ ಕಾಲಿಡುತ್ತಿದ್ದರು. ಹೀಗಾಗಿ ಹೆರಿಗೆ ಸುಸೂತ್ರವಾಗಿ ನಡೆಯಲಿ ಎಂದು ಪ್ರಾರ್ಥಿಸಲು ದಂಪತಿಗಳು ಶಿವಗಂಗೆಯ ಗಣಪತಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ವಾಪಾಸ್ ಆಗುತ್ತಿದ್ದರು. ಆದರೆ ಅಚಾನಕ್ಕಾಗಿ ಇವರ ಸ್ಕೂಟರ್‌ಗೆ ಲಾರಿ ಡಿಕ್ಕಿ ಹೊಡೆದಿದೆ.

ಎಡೇಹಳ್ಳಿ ಗೇಟ್ ಬಳಿ ಲಾರಿ ಮತ್ತು ಬಸ್ ಚಾಲಕನ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಗ್ವಾದ ನಡೆಯುತ್ತಿದ್ದು, ಸಿಂಚನಾ ಅವರ ಗಂಡ ಮಂಜುನಾಥ್ ಸರ್ವಿಸ್ ರಸ್ತೆಯಲ್ಲಿ ಹೋಗಿದ್ದಾರೆ. ಈ ವೇಳೆ ಇವರ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಡ ಮಂಜುನಾಥ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ತುಂಬು ಗರ್ಭಿಣಿ ಸಿಂಚನ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ವೇಳೆ ತಾಯಿಯ ಹೊಟ್ಟೆಯಿಂದ ಹೊರ ಬಂದ ಮಗು ಕೂಡ ಮೃತಪಟ್ಟಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!