ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹಾಸ್ಟೆಲ್‌ನ ಕಿಟಕಿ ಮೂಲಕ ಕೈ ಹಾಕಿ ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿ ಬಂಧನ: 22 ವರ್ಷಕ್ಕೆ ಹಲವು ಪ್ರಕರಣ ದಾಖಲು..!

ಹಾಸ್ಟೆಲ್‌ನ ಕಿಟಕಿ ಮೂಲಕ ಕೈ ಹಾಕಿ ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿ ಬಂಧನ: 22 ವರ್ಷಕ್ಕೆ ಹಲವು ಪ್ರಕರಣ ದಾಖಲು..!

ಉಡುಪಿ: ಹಾಸ್ಟೆಲ್‌ನ ಕಿಟಕಿ ಮೂಲಕ ಕೈ ಹಾಕಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸೆ.1ರಂದು ಬೆಳಗಿನ ಜಾವ 2.15 ಗಂಟೆ ಸುಮಾರಿಗೆ ಮಣಿಪಾಲದ ಅನಂತನಗರ ಎಂಬಲ್ಲಿರುವ ಹಿಂದುಳಿದ ವರ್ಗದವರ ಮೆಟ್ರಿಕ್ ನಂತರದ ಹಾಸ್ಟೆಲ್‌ನ ಕಿಟಕಿಯಿಂದ ಕೈಹಾಕಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಮಣಿಪಾಲ ಠಾಣಾ ಪೊಲೀಸ್ ನಿರೀಕ್ಷಕ ದೇವರಾಜ್ ಟಿ.ವಿ. ನೇತೃತ್ವದಲ್ಲಿ ಪಿಎಸ್‌ಐ ರಾಘವೇಂದ್ರ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಇಂದ್ರಾಳಿ ರೈಲ್ವೆ ನಿಲ್ದಾಣದ ಬಳಿಯ ನಿವಾಸಿ ನವೀನ್ ನಾಯ್ಕ (22) ಎಂದು ಗುರುತಿಸಲಾಗಿದೆ. ಆರೋಪಿಯು 2023ರಲ್ಲಿ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಭಾಗಿಯಾಗಿದ್ದಲ್ಲದೆ, ಈತನ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ದಾಖಲಾದ ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!