ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚಿಕ್ಕಮಗಳೂರು: 30 ಅಡಿ ಎತ್ತರದಿಂದ ಕೆಳಗೆ ಬಿದ್ದ ಪ್ರವಾಸಿಗರ ಕಾರು..!: ಪ್ರಾಣಾಪಾಯದಿಂದ ಪಾರಾದ ಐವರು..!

ಚಿಕ್ಕಮಗಳೂರು: 30 ಅಡಿ ಎತ್ತರದಿಂದ ಕೆಳಗೆ ಬಿದ್ದ ಪ್ರವಾಸಿಗರ ಕಾರು..!: ಪ್ರಾಣಾಪಾಯದಿಂದ ಪಾರಾದ ಐವರು..!

ಚಿಕ್ಕಮಗಳೂರು: ಬೆಂಗಳೂರಿನಿಂದ ಹೊರನಾಡಿಗೆ ಹೋಗುತ್ತಿದ್ದ ಪ್ರವಾಸಿ ಕಾರೊಂದು ರಸ್ತೆ ತಿರುವಿನಲ್ಲಿ ಪಲ್ಟಿಯಾಗಿ 30 ಅಡಿ ಎತ್ತರದಿಂದ ಕೆಳಗೆ ಬಿದ್ದ ಘಟನೆ ಸೆ.21ರಂದು ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮದ ಬಳಿ ಸಂಭವಿಸಿದೆ.

ದಟ್ಟ ಮಂಜು ಕವಿದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದ್ದು ಕಾರಿನಲ್ಲಿದ್ದ ಐವರು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಬಹುತೇಕ ಜಖಂಗೊAಡಿದೆ. ಈ ಬಗ್ಗೆ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಿಂದ ಜಾವಳಿ, ಸುಂಕಸಾಲೆ, ಹಿರೇಬೈಲು ಮಾರ್ಗವಾಗಿ ಕಳಸ - ಹೊರನಾಡಿಗೆ ಹೋಗುವ ಮಾರ್ಗವು ಎತ್ತರದ ಪ್ರದೇಶ ಹಾಗೂ ಕಾಫಿತೋಟಗಳ ಮಧ್ಯೆ ತಿರುವುಗಳಿಂದ ಕೂಡಿದ್ದು ಪ್ರವಾಸಿಗರು ಅತ್ಯಂತ ಜಾಗರೂಕರಾಗಿ ವಾಹನ ಚಲಾಯಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!