ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಟ ಆರೋಪಿ ದರ್ಶನ್‌ಗೆ ಮತ್ತೆ ನಿರಾಸೆ..!: ಅ. 4ರಂದು ಜಾಮೀನು ಅರ್ಜಿಯ ವಿಚಾರಣೆ

ನಟ ಆರೋಪಿ ದರ್ಶನ್‌ಗೆ ಮತ್ತೆ ನಿರಾಸೆ..!: ಅ. 4ರಂದು ಜಾಮೀನು ಅರ್ಜಿಯ ವಿಚಾರಣೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ಆರೋಪಿ ನಟ ದರ್ಶನ್ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಅವರ ಜಾಮೀನು ಅರ್ಜಿ ವಿಚಾರಣೆ ದಿನಾಂಕವನ್ನು ಮುಂದೂಡಲಾಗಿದೆ.

ಸೆಪ್ಟೆಂಬರ್ 30ರಂದು ಬೇಲ್ ಸಿಗಬಹುದು ಎಂದು ದರ್ಶನ್ ಆಪ್ತರು ನಿರೀಕ್ಷಿಸಿದ್ದರು. ಆದರೆ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದಕ್ಕೆ ಹಾಕಲಾಗಿದ್ದು ಅಕ್ಟೋಬರ್ 4ರಂದು ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

ವಾದ ಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್ ಪರ ವಕೀಲರು ಮನವಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಆದಷ್ಟು ಬೇಗ ದರ್ಶನ್ ಅವರಿಗೆ ಜಾಮೀನು ಸಿಗಲಿ ಅಂತ ಫ್ಯಾನ್ಸ್ ಬಯಸುತ್ತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!