ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › 5 ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ: ಬಾಲಕನ ಕುಟುಂಬಸ್ಥರಿಗೆ ಆರೋಪಿಗಳಿಂದ ಹಲ್ಲೆ : ಕೊಲೆ ಬೆದರಿಕೆ..!: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಘಟನೆ

5 ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ: ಬಾಲಕನ ಕುಟುಂಬಸ್ಥರಿಗೆ ಆರೋಪಿಗಳಿಂದ ಹಲ್ಲೆ : ಕೊಲೆ ಬೆದರಿಕೆ..!: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಘಟನೆ

ಸಾಂದರ್ಭಿಕ ಚಿತ್ರ

ಉತ್ತರ ಪ್ರದೇಶ: ಐದು ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ವರದಿಯಾಗಿದೆ.

ಸೆಪ್ಟೆಂಬರ್ 26 ರಂದು ಬಾಲಕನ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿದ್ದು, ಬಾಲಕ ದೇಹದ ಮೇಲಿದ್ದ ಗಾಯದ ಗುರುತುಗಳ ಬಗ್ಗೆ ಪ್ರಶ್ನಿಸಿದಾಗ, ಅವನು ತನ್ನ ಕುಟುಂಬ ಸದಸ್ಯರಿಗೆ ಘಟನೆಯ ಬಗ್ಗೆ ವಿವರಿಸಿದ್ದಾನೆ.

ಅರ್ಶ್ ಮತ್ತು ಜುನೈದ್ ಎಂಬ ಕಾಮುಕರು ಬಾಲಕನನ್ನು ಅವನ ಮನೆಯಿಂದ ಕರೆದೊಯ್ದು ಹತ್ತಿರದ ಜಮೀನಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಲ್ಲೇ ಹತ್ತಿರದಲ್ಲಿ ಕೆಲಸ ಮಾಡುತ್ತಿದ್ದ ರಿಜ್ವಾನ್ ಮತ್ತು ಅಲ್ಫೆಜ್ ಘಟನೆಯ ವೀಡಿಯೊವನ್ನು ಚಿತ್ರೀಕರಿಸಿ ಅಂತರ್ಜಾಲದಲ್ಲಿ ಹಂಚಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬಾಲಕನ ಕುಟುಂಬ ಸದಸ್ಯರು ಸಮೀಪದ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕುಟುಂಬಸ್ಥರಿಗೆ ಥಳಿಸಿ ನಿಂದಿಸಿದ್ದಲ್ಲದೆ, ಕುಟುಂಬ ಸದಸ್ಯರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆರೋಪಿಗಳನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು ಎಂದು ಹಾಪುರ್ ಪೊಲೀಸ್ ಇನ್ಸ್ಪೆಕ್ಟರ್ ವಿಜಯ್ ಕುಮಾರ್ ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!