ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಲೋ ಬಿಪಿ: ತರಗತಿಯಲ್ಲೇ ಕುಸಿದು ಬಿದ್ದು ಬಾಲಕ ಸಾವು..!

ಲೋ ಬಿಪಿ: ತರಗತಿಯಲ್ಲೇ ಕುಸಿದು ಬಿದ್ದು ಬಾಲಕ ಸಾವು..!

ಸಾಂದರ್ಭಿಕ ಚಿತ್ರ

ರಾಯಚೂರು : ಲೋ ಬಿಪಿಯಿಂದ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ನಡೆದಿದೆ.

ವಿದ್ಯಾವಾಹಿನಿ ಶಾಲೆಯ 8ನೇ ತರಗತಿ ವಿದ್ಯಾರ್ಥಿ ತರುಣ್ ಕುಮಾರ (14) ಎಂದಿನಂತೆ ಶಾಲೆಗೆ ಆಗಮಿಸಿ ತರಗತಿಯಲ್ಲಿ ಕುಳಿತಿದ್ದ.

ಪಾಠಕೇಳುತ್ತಿದ್ದಂತೆ ತನಗೆ ಕಣ್ಣು ಮಂಜಾಗುತ್ತಿದೆ ಎಂದು ಹೇಳಿ ತನ್ನ ಮುಂದಿನ ಬೆಂಚ್‌ನಲ್ಲಿ ಕುಳಿತುಕೊಳ್ಳಲು ಪ್ರಯತ್ನಿಸಿದಾಗ ದಿಢೀರ್ ಕುಸಿದು ಬಿದ್ದಿದ್ದಾನೆ. ಕೂಡಲೇ ಶಾಲಾ ವಾಹನದಲ್ಲಿ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಅಷ್ಟೊತ್ತಿಗೆ ಬಾಲಕ ಮೃತಪಟ್ಟಿದ್ದಾನೆ.

ವಿದ್ಯಾರ್ಥಿಯನ್ನು ಪರೀಕ್ಷಿಸಿದ ವೈದ್ಯರು ಬಿಪಿ ಲೋ ಆಗಿದ್ದರಿಂದ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!