ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ: ವಕೀಲರ ಸಂಘ (ರಿ) ಬೆಳ್ತಂಗಡಿ : ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ವಕೀಲರ ಸಂಘ (ರಿ) ಬೆಳ್ತಂಗಡಿ : ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ವಕೀಲರ ಸಂಘ (ರಿ) ಬೆಳ್ತಂಗಡಿ ಇದರ ವಾರ್ಷಿಕ ಮಹಾಸಭೆಯು ಸೆ.27 ರಂದು ಶ್ರೀ ಮಂಜುನಾಥ ಸ್ವಾಮಿ ಕಲಾಭವನದ ಸಭಾಭವನದಲ್ಲಿ ನಡೆದಿದೆ.

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ ಇವರ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಪ್ರಶಾಂತ್ ಎಂ ಲೆಕ್ಕಪತ್ರ ಮಂಡಿಸಿದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ವಿವಿಧ ಕಾರ್ಯಕ್ರಮಗಳಲ್ಲಿ ಭೋಜನದ ವ್ಯವಸ್ಥೆಯನ್ನು ಏರ್ಪಡಿಸಿದ್ದ ಸಂಘದ ಸದಸ್ಯರಾದ ಶಶಿಕಿರಣ್ ಜೈನ್, ಶ್ರೀನಿವಾಸ ಗೌಡ ಬೆಳಾಲು ಮತ್ತು ಗಣೇಶ್ ಗೌಡ , ಎ. ಮನೋಹರ್ ಕುಮಾರ್ ಇವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಹಿರಿಯ ವಕೀಲರ ಸಮಿತಿಯ ಅಧ್ಯಕ್ಷರಾದ ಅಲೋಸಿಯಸ್ ಎಸ್ ಲೋಬೊ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷರಾದ ಅಶೋಕ್ ಕರಿಯನೆಲ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ ಧನ್ಯವಾದ ಸಮರ್ಪಿಸಿದರು. ವಕೀಲರಾದ ಉದಯ ಕುಮಾರ್ ಬಿ.ಕೆ ಕಾರ್ಯಕ್ರಮ ನಿರೂಪಿಸಿದರು.

ಶ್ರೀನಿವಾಸ್ ಗೌಡ ಬೆಳಾಲು ಅವರು ಭೋಜನದ ವ್ಯವಸ್ಥೆ ಮಾಡಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!