ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದೇವಸ್ಥಾನದಿಂದ ಬೆಳ್ಳಿ ಆಭರಣ ಕಳ್ಳತನ: ಕಳ್ಳರನ್ನು ನೋಡಿದ ಮಹಿಳೆಯನ್ನೇ ಬಾವಿಗೆ ತಳ್ಳಿ ಕೊಲೆ..!

ದೇವಸ್ಥಾನದಿಂದ ಬೆಳ್ಳಿ ಆಭರಣ ಕಳ್ಳತನ: ಕಳ್ಳರನ್ನು ನೋಡಿದ ಮಹಿಳೆಯನ್ನೇ ಬಾವಿಗೆ ತಳ್ಳಿ ಕೊಲೆ..!

ಬೆಳಗಾವಿ: ದೇಗುಲದಲ್ಲಿನ ಬೆಳ್ಳಿ ಆಭರಣ ಕದ್ದು ಪರಾರಿಯಾಗುತ್ತಿದ್ದ ಕಳ್ಳರನ್ನು ನೋಡಿದ ಮಹಿಳೆಯನ್ನೇ ಬಾವಿಗೆ ತಳ್ಳಿ ಕೊಲೆ ಮಾಡಿರುವ ಅಮಾನವೀಯ ಘಟನೆ ಶಿಂದೊಳಿಯಲ್ಲಿ ನಡೆದಿದೆ.

ಶಿಂದೊಳಿ ಗ್ರಾಮದ ಭಾರತಿ ಪೂಜಾರಿ (48) ಎಂಬವರು ಬೆಳ್ಳಂಬೆಳಗ್ಗೆ ತನ್ನ ಮನೆಯ ದನಕರುಗಳ ಸಗಣಿ ಎತ್ತಿ ತಿಪ್ಪೆಗೆ ಎಸೆಯಲು ಇವರು ಬಂದಿದ್ದರು. ಆಗ ಮನೆ ಪಕ್ಕದಲ್ಲಿದ್ದ ಮಸಣವ್ವ ದೇಗುಲದಲ್ಲಿನ ಆಭರಣಗಳನ್ನು ಕಳ್ಳರು ಕದಿಯಲು ಮುಂದಾಗಿದ್ದರು. ಇದನ್ನು ನೋಡಿದ ಮಹಿಳೆ ಗ್ರಾಮಸ್ಥರಿಗೆ ತಿಳಿಸಿ, ನಮ್ಮ ಕೃತ್ಯ ಬೆಳಕಿಗೆ ಬರುತ್ತದೆ ಎಂದು ಮಹಿಳೆಯನ್ನೇ ಹತ್ಯೆ ಮಾಡಿರುವ ಮಾಹಿತಿ ಲಭ್ಯವಾಗಿದೆ.

ಭಾರತಿ ಮನೆಗೆ ಬಾರದೇ ಇದ್ದದುರಿಂದ  ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ದೇಗುಲದ ಎದುರು ಸಗಣಿ ಬುಟ್ಟಿ, ಬಾವಿ ಎದುರು ಮಹಿಳೆಯ ಚಪ್ಪಲಿ ನೋಡಿದ ಕುಟುಂಬಸ್ಥರು ಮತ್ತಷ್ಟು ಆತಂಕಗೊAಡು, ತಕ್ಷಣವೇ ಮಾರಿಹಾಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ತಪಾಸಣೆ ವೇಳೆ ಬಾವಿಯಲ್ಲಿ ಭಾರತಿ ಪೂಜಾರಿ ಶವ ಪತ್ತೆಯಾಗಿದೆ. ಸ್ಥಳೀಯರೇ ಕಳ್ಳತನ ಮಾಡಿ ಗೊತ್ತಾಗಬಾರದು ಎಂದು ಈ ಕೃತ್ಯ ಎಸಗಿದ್ದಾರೆಂದು ಭಾರತಿ ಪೋಷಕರು ಆರೋಪಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!