ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ರೇಣುಕಾಸ್ವಾಮಿ ಕೊಲೆ ಪ್ರಕರಣ: ಬಂಧಿತ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯ: ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ವಿಚಾರಣೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಬಂಧಿತ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯ: ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ವಿಚಾರಣೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯವಾಗಲಿದ್ದು, ಇಂದೇ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಆರೋಪಿಗಳು ನ್ಯಾಯಾಧೀಶರ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.

ಬಳ್ಳಾರಿ ಜೈಲಿನಲ್ಲಿರುವ ಆರೋಪಿ ನಟ ದರ್ಶನ್ ಮತ್ತು ರಾಜ್ಯದ ಬೇರೆ ಬೇರೆ ಜೈಲುಗಳಲ್ಲಿರುವ ಎಲ್ಲ ಆರೋಪಿಗಳು ಕಾರಾಗೃಹದಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ವಿಚಾರಣೆಗೆ ಹಾಜರಾಗಲಿದ್ದು ಪ್ರಕರಣ  ಸಂಬಂಧ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್ ಇಂದು ಎಲ್ಲಾ 17 ಜನ ಆರೋಪಿಗಳ ಕೈ ಸೇರಲಿದೆ. ಚಾರ್ಜ್ ಶೀಟ್ ಕೈ ಸೇರಿದ ಬಳಿಕ ಆರೋಪಿಗಳು ಇಂದೇ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.

ದರ್ಶನ್, ಪವಿತ್ರಾ ಗೌಡ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಆರೋಪಿಗಳೆಲ್ಲರೂ ಬೆಂಗಳೂರಿನ 24ನೇ ಎಸಿಎಂಎA ನ್ಯಾಯಾಲಯದ ನ್ಯಾಯಾಧೀಶರ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!