ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಂಗಳೂರು, ಮಹಿಳೆಯ ಬರ್ಬರ ಹತ್ಯೆ ಪ್ರಕರಣ: ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ..! :

ಬೆಂಗಳೂರು, ಮಹಿಳೆಯ ಬರ್ಬರ ಹತ್ಯೆ ಪ್ರಕರಣ: ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ..! :

 

 

 

 

ಬೆಂಗಳೂರು: ವೈಯಾಲಿಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮಹಿಳೆ ಮಹಾಲಕ್ಷ್ಮಿಯ ಬರ್ಬರ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರಬಹುದೆಂದು ಶಂಕಿಸಲಾಗಿದ್ದ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್​ ಮೂಲಗಳು ತಿಳಿಸಿವೆ. ಕೊಲೆ ಬಳಿಕ ತಲೆಮರೆಸಿಕೊಂಡು ಓಡಾಡುತ್ತಿದ್ದ ಶಂಕಿತ ಆರೋಪಿಯು ಒಡಿಶಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಲಭ್ಯವಾಗಿದೆ.

ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಬೆಂಗಳೂರು ಪೊಲೀಸರು, ಆರೋಪಿಯ ಬಂಧನಕ್ಕೆ ಒಡಿಶಾ ಸೇರಿದಂತೆ ಹಲವು ಕಡೆ ಕಾರ್ಯಾಚರಣೆ ನಡೆಸುತ್ತಿದ್ದು, ಈ ನಡುವೆ ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ಬರುತ್ತಿದೆ.ಪ್ರಕರಣದ ಬಗ್ಗೆ ಮಾತನಾಡಿದ್ದ ಪರಮೇಶ್ವರ್​: ಬೆಂಗಳೂರನ್ನೇ ತಲ್ಲಣಗೊಳಿಸಿರುವ ವೈಯಾಲಿಕಾವಲ್‌ನಲ್ಲಿ ನಡೆದ ಮಹಿಳೆ‌ ಮಹಾಲಕ್ಷ್ಮೀ ಹತ್ಯೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ಈಗಾಗಲೇ ಆರೋಪಿ ಒಡಿಶಾದಲ್ಲಿದ್ದಾನೆಂದು ಗುರುತಿಸಲಾಗಿದೆ. ಸ್ಥಳ ಬದಲಾಯಿಸುತ್ತಿದ್ದು ತೀವ್ರ ಶೋಧ ನಡೆದಿದೆ. ಈಗಾಗಲೇ ಇಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಹೆಚ್ಚಿನ ಸಾಕ್ಷ್ಯ ಮತ್ತು ಮಾಹಿತಿ ಆಧಾರದ ಮೇಲೆ ಒಡಿಶಾದಲ್ಲಿ ತಲೆಮರೆಸಿಕೊಂಡಿರುವ ವ್ಯಕ್ತಿಯ ಮೇಲೆ ಸಂಶಯವಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಮಂಗಳವಾರ ಬೆಳಗ್ಗೆ ಮಾಹಿತಿ ನೀಡಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!