ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹೊಸ ಮೊಬೈಲ್ ಜಗಳ ಕೊಲೆಯಲ್ಲಿ ಅಂತ್ಯ..!: ಆರೋಪಿ ಪೊಲೀಸ್ ವಶ

ಹೊಸ ಮೊಬೈಲ್ ಜಗಳ ಕೊಲೆಯಲ್ಲಿ ಅಂತ್ಯ..!: ಆರೋಪಿ ಪೊಲೀಸ್ ವಶ

ಮಂಗಳೂರು: ಹೊಸ ಮೊಬೈಲ್ ವಾಪಸ್ ಕೊಡದೆ ಹಾಳು ಮಾಡಿರುವುದಕ್ಕೆ ಕೋಪಗೊಂಡು ಸ್ನೇಹಿತರ ಮಧ್ಯೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು ಆರೋಪಿ ಪೊಲೀಸ್ ವಶವಾಗಿದ್ದಾನೆ.

ಸೆಪ್ಟಂಬರ್ 21ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತೋಟಾಬೆಂಗ್ರೆಯ ಬೊಬ್ಬರ್ಯ ದೈವಸ್ಥಾನದ ಹಿಂಬದಿಯ ಸಮುದ್ರ ಕಿನಾರೆಯ ಬಳಿ ಬಾಗಲಕೋಟೆ ಮೂಲದ 39 ವರ್ಷದ ಮುತ್ತು ಬಸವರಾಜ ವಡ್ಡರ್ ಯಾನೆ ಮುದುಕಪ್ಪ ಎಂಬವರ ಕೊಲೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹನುಮಂತ ದುರುಗಪ್ಪ ವಡ್ಡರ್ ಎಂಬವರು ನೀಡಿದ ದೂರಿನಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಶುರು ಮಾಡಿದ ಪೊಲೀಸರು ಆರೋಪಿ ಧರ್ಮರಾಜ್ ಸುವರ್ಣ ಎಂಬಾತನನ್ನು ಸೆ.26ರಂದು ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಚೊಂಪಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಿದ್ದಾರೆ. ತನಿಖೆಯಲ್ಲಿ ಕೊಲೆಯ ವಿಚಾರ ಬೆಳಕಿಗೆ ಬಂದಿದೆ.

ಧರ್ಮರಾಜ್ ಸುವರ್ಣ ಮತ್ತು ಮುತ್ತು ಬಸವರಾಜ ವಡ್ಡರ್ ಕಳೆದ ಕೆಲವು ಸಮಯದಿಂದ ಒಬ್ಬರಿಗೊಬ್ಬರು ಪರಿಚಯಸ್ಥರು. ಇತ್ತೀಚೆಗೆ ಧರ್ಮರಾಜ್ ಸುವರ್ಣ ಹೊಸ ಮೊಬೈಲ್ ಖರೀದಿಸಿದ್ದು, ಆ ಮೊಬೈಲನ್ನು ಮುತ್ತು ಬಸವರಾಜ್ ತೆಗೆದುಕೊಂಡು ವಾಪಸ್ ನೀಡದೆ ಹಾಳು ಮಾಡಿದ್ದ. ಈ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗಿ ಆರೋಪಿ ಧರ್ಮರಾಜ್ ಸುವರ್ಣ ಮುತ್ತು ಬಸವರಾಜನನ್ನು ಮರದ ದಿನ್ನೆಯಿಂದ ಹೊಡೆದು ಕೊಲೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!