ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶಿರೂರು ಗುಡ್ಡ ಕುಸಿತ: ಚಾಲಕ ಅರ್ಜುನ್ ಮೃತದೇಹ ಪತ್ತೆ..!: ಇನ್ನಿಬ್ಬರ ಮೃತದೇಹಕ್ಕಾಗಿ ಶೋಧ: ಭರವಸೆ ಮೂಡಿಸಿದ ಡ್ರೆಜ್ಜಿಂಗ್ ಮಶಿನ್ ಕಾರ್ಯಾಚರಣೆ

ಶಿರೂರು ಗುಡ್ಡ ಕುಸಿತ: ಚಾಲಕ ಅರ್ಜುನ್ ಮೃತದೇಹ ಪತ್ತೆ..!: ಇನ್ನಿಬ್ಬರ ಮೃತದೇಹಕ್ಕಾಗಿ ಶೋಧ: ಭರವಸೆ ಮೂಡಿಸಿದ ಡ್ರೆಜ್ಜಿಂಗ್ ಮಶಿನ್ ಕಾರ್ಯಾಚರಣೆ

ಕಾರವಾರ : ಶಿರೂರು ಗುಡ್ಡ ಕುಸಿತ ಘಟನೆಯಲ್ಲಿ ನಾಪತ್ತೆಯಾಗಿದ್ದ ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆಯಾಗಿದ್ದು ಡ್ರೆಜ್ಜಿಂಗ್ ಮಶಿನ್ ಕಾರ್ಯಾಚರಣೆ ಒಂದು ಹಂತದಲ್ಲಿ ಯಶಸ್ಸು ಪಡೆದಿದೆ.

ಆರನೇ ದಿನ ಶೋಧ ಕಾರ್ಯದಲ್ಲಿ ಕೇರಳ ಮೂಲದ ಭಾರತ್ ಬೆಂಜ್ ಲಾರಿಯ ಜೊತೆಗೆ ಚಾಲಕ ಅರ್ಜುನ್ ಮೃತದೇಹ ಕೂಡ ಪತ್ತೆಯಾಗಿದೆ.

ಗಂಗಾವಳಿ ನದಿಯಲ್ಲಿ ಇಂದು ಮುಂಜಾನೆ ಡ್ರೆಜ್ಜಿಂಗ್ ಮಶಿನ್ ಗೆ ಬೃಹತ್ ವಸ್ತು ಪತ್ತೆಯಾಗಿತ್ತು. ಅಲ್ಲದೆ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಲಾರಿಯ ಬಿಡಿಭಾಗ ಕೂಡ ದೊರೆತಿತ್ತು. ಇದರಿಂದ ಗಂಗಾವಳಿ ನದಿಯಲ್ಲಿ ಡ್ರೆಜ್ಜಿಂಗ್ ಮಶಿನ್ ನಿರಂತರವಾಗಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದು ಇದೀಗ ಭಾರತ್ ಬೆಂಜ್ ಲಾರಿ ಸಿಕ್ಕಿದೆ. ಸದ್ಯ ಲಾರಿಯನ್ನು ಬಾರ್ಜ್ ನಲ್ಲಿರುವ ಕ್ರೇನ್ ಮೂಲಕ ಮೇಲಕ್ಕೆ ಎತ್ತಿದ್ದು ಲಾರಿ ಮುಂಭಾಗ ಹಾಗೂ ಚಾಲಕನ ಮೃತದೇಹ ಗೋಚರವಾಗಿದೆ. ಆದರೆ ಇನ್ನಿಬ್ಬರ ಮೃತದೇಹಗಳು ಪತ್ತೆಯಾಗಬೇಕಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!