ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉರುವಾಲು, ಮನೆಗೆ ಸಿಡಿಲು ಬಡಿದು ಭಾರೀ ಹಾನಿ:ಬಿರುಕು ಬಿಟ್ಟ ಗೋಡೆ:ಸುಟ್ಟು ಕರಕಲಾದ ವಿದ್ಯುತ್ ಉಪಕರಣಗಳು: ಅದೃಷ್ಟವಶಾತ್ ಮನೆ ಮಂದಿ ಪಾರು:

ಉರುವಾಲು, ಮನೆಗೆ ಸಿಡಿಲು ಬಡಿದು ಭಾರೀ ಹಾನಿ:ಬಿರುಕು ಬಿಟ್ಟ ಗೋಡೆ:ಸುಟ್ಟು ಕರಕಲಾದ ವಿದ್ಯುತ್ ಉಪಕರಣಗಳು: ಅದೃಷ್ಟವಶಾತ್ ಮನೆ ಮಂದಿ ಪಾರು:

 

 

 

ಬೆಳ್ತಂಗಡಿ:ಮನೆಗೆ ಸಿಡಿಲು ಬಡಿದ ಪರಿಣಾಮ ಭಾರೀ ಹಾನಿಯಾದ ಘಟನೆ ಉರುವಾಲು ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ. ಉರುವಾಲು ಗ್ರಾಮದ ತಾರಿದಡಿ ಸೇಸಪ್ಪ ಎಂಬವರ ಮನೆಗೆ ಸಂಜೆ ಸುಮಾರು ನಾಲ್ಕು ಗಂಟೆ ಸುಮಾರಿಗೆ ಸಿಡಿಲು ಬಡಿದಿದ್ದು ಪರಿಣಾಮ ಗೋಡೆ ಬಿರುಕು ಬಿಟ್ಟು ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಬಗ್ಗೆ ಪ್ರಜಾಪ್ರಕಾಶ ನ್ಯೂಸ್ ಗೆ ಮಾಹಿತಿ ನೀಡಿದ ಸೇಸಪ್ಪ ಅವರು ಸಂಜೆ  ಸುಮಾರು 3.45 ರಿಂದ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಈ ವೇಳೆ ಶಾಲೆಯಿಂದ ಮಕ್ಕಳನ್ನು ಕರೆದುಕೊಂಡು ಬರಲು ಹೋಗಿದ್ದು ಮನೆಗೆ ಬಂದು ನೋಡಿದಾಗ ಸಿಡಿಲು ಬಡಿದು ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿದೆಯಲ್ಲದೇ ಗೋಡೆಯಿಂದ ಕಿತ್ತು ಬಂದಿದೆ. ಅಲ್ಲಲ್ಲಿ ಗೋಡೆ ಬಿರುಕು ಬಿಟ್ಟಿದೆ.‌ಶೌಚಾಲಯದ ಗೋಡೆ ಸಂಪೂರ್ಣ ಹಾನಿಗೊಳಗಾಗಿದೆ. ಅದೃಷ್ಟವಶಾತ್ ಮಕ್ಕಳನ್ನು ಕರೆ ತರಲು ನಾವು ಶಾಲೆಗೆ  ಹೋಗಿದ್ದರಿಂದ ಮಕ್ಕಳಿಗೆ ಹಾಗೂ ನಮಗೆ ಏನು ತೊಂದರೆ ಅಗಿಲ್ಲ, ಸಿಡಿಲು ಬಡಿತದಿಂದ ಮನೆಗೆ ಸಂಪೂರ್ಣ ಹಾನಿಯಾಗಿದೆ. ಈ ಬಗ್ಗೆ ಪಂಚಾಯತ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಅವರು ಸ್ಥಳಕ್ಕೆ ಬಂದು ಪರಿಶೀಲಿಸುವುದಾಗಿ ಹೇಳಿದ್ದಾರೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!