ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪ್ರಕರಣ ದಾಖಲು..!

ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪ್ರಕರಣ ದಾಖಲು..!

ಮಂಗಳೂರು: ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ದಕ್ಷಿಣ ಕನ್ನಡದ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಹೋಟೆಲ್‌ವೊಂದರಲ್ಲಿ 2023ರ ಜೂನ್‌ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಅರುಣ್ ಕುಮಾರ್ ಪುತ್ತಿಲ ವಿರುದ್ಧ 47 ವರ್ಷದ ಮಹಿಳೆ ನೀಡಿದ ದೂರಿನ ಅನ್ವಯ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೌರ್ಜನ್ಯ ಎಸಗಿರುವ ಸಂದರ್ಭದ ಫೋಟೋ, ಸೆಲ್ಫಿ ಹಾಗೂ ವಿಡಿಯೋಗಳನ್ನು ಇಟ್ಟುಕೊಂಡು ಬ್ಲಾಕ್‌ಮೇಲ್ ಮಾಡುತ್ತಿದ್ದಾರೆಂದು ಮಹಿಳೆ ಆರೋಪಿಸಿದ್ದು ಈ ಹಿನ್ನೆಲೆಯಲ್ಲಿ ಐಪಿಸಿ 417, 354ಂ, 506 ಸೆಕ್ಷನ್‌ಗಳಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಹಿಳೆ, ಅರುಣ್ ಕುಮಾರ್ ಪುತ್ತಿಲರ ಹಿಂದುತ್ವದ ಪ್ರತಿಪಾದನೆಗೆ ಅಭಿಮಾನಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಅವರನ್ನು ಫಾಲೋ ಮಾಡುತ್ತಿದ್ದುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!