ಎರಡು ಬೈಕ್‌ಗಳಲ್ಲಿ ಮಸೀದಿ ಬಳಿ ಬಂದ ನಾಲ್ವರು ಕಲ್ಲು ತೂರಿ ಪರಾರಿಯಾಗಿದ್ದು, ಇದರಿಂದ ಮಸೀದಿಯ ಕಿಟಕಿಗಳಿಗೆ ಹಾನಿಯಾಗಿದೆ. ಸುರತ್ಕಲ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಸೀದಿ ಸಿಸಿಟಿವಿ ಸೇರಿದಂತೆ ಸಮೀಪದ ಸಿಸಿಟಿವಿ ಫೂಟೇಜ್ ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಕಲ್ಲು ತೂರಾಟ ಮಾಡಿರುವ ಬಗ್ಗೆ ಪ್ರಕರಣ ದಾಖಲಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.
ಘಟನೆ ಬಳಿಕ ಸುರತ್ಕಲ್ ಪ್ರದೇಶ ಸೇರಿದಂತೆ ಮಂಗಳೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.