ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಹಾಲಕ್ಷ್ಮಿ ಕೊಲೆ ಆರೋಪಿ ಬರೆದಿದ್ದ ಡೆತ್ ನೋಟ್ ಪತ್ತೆ..!: ಪತ್ರದಲ್ಲಿ ಸತ್ಯ ಬಿಚ್ಚಿಟ್ಟ ಆರೋಪಿ :ಡೆತ್ ನೋಟ್‌ನಲ್ಲೇನಿದೆ?

ಮಹಾಲಕ್ಷ್ಮಿ ಕೊಲೆ ಆರೋಪಿ ಬರೆದಿದ್ದ ಡೆತ್ ನೋಟ್ ಪತ್ತೆ..!: ಪತ್ರದಲ್ಲಿ ಸತ್ಯ ಬಿಚ್ಚಿಟ್ಟ ಆರೋಪಿ :ಡೆತ್ ನೋಟ್‌ನಲ್ಲೇನಿದೆ?

ಬೆಂಗಳೂರು: ವೈಯಾಲಿಕಾವಲ್ ನ ಪೈಪ್ ಲೈನ್ ರಸ್ತೆಯ ಮನೆಯೊಂದರಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿ ಎಂಬಾಕೆಯ ದೇಹ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ ಕೊನೆ ಕ್ಷಣದಲ್ಲಿ ಬರೆದಿದ್ದ ಡೆತ್ ನೋಟ್ ಪತ್ತೆಯಾಗಿದೆ.

ಕೊಲೆ ಆರೋಪಿಯ ಹುಡುಕಾಟದಲ್ಲಿ ಹೊರ ರಾಜ್ಯಕ್ಕೆ ಹೋಗಿದ್ದ ಪೊಲೀಸರಿಗೆ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿದು ಬಂದಿದೆ. ಜೊತೆಗೆ ಆತ್ಮಹತ್ಯೆಗೀಡಾದ ಹಂತಕ ಬರೆದಿಟ್ಟ ಡೆತ್ ನೋಟ್ ಕೂಡ ಪತ್ತೆಯಾಗಿದೆ. ಅದರಲ್ಲಿ ಕೊಲೆ ರಹಸ್ಯ ಬಯಲಾಗಿದೆ.

ಡೆತ್ ನೋಟ್‌ನಲ್ಲೇನಿದೆ?

ಸೆಪ್ಟಂಬರ್ 3ರಂದು ಪ್ರೇಯಸಿ ಮಹಾಲಕ್ಷ್ಮೀಯನ್ನು ಹತ್ಯೆ ಮಾಡಿದ್ದೇನೆ ಎಂದು ಮಹಾಲಕ್ಷ್ಮೀ ಹತ್ಯೆ ಕುರಿತು ರಂಜನ್ ಡೆತ್ ನೋಟ್ ನಲ್ಲಿ ಉಲ್ಲೇಖಿಸಿ, ಸೆಪ್ಟಂಬರ್ 3 ರಂದು ಆಕೆಯ ಮನೆಗೆ ಹೋದಾಗ ಕೃತ್ಯ ಎಸಗಿದ್ದಾಗಿ ಬರೆದಿದ್ದಾನೆ. ವೈಯಕ್ತಿಕ ವಿಚಾರಗಳಿಗೆ ಆಕೆ ಜೊತೆ ಜಗಳವಾಯಿತು. ಆಗ ಆಕೆ ಹಲ್ಲೆ ನಡೆಸಿದಳು, ಇದರಿಂದ ಕೋಪಗೊಂಡು ಆಕೆಯನ್ನು ಕೊಂದೆ. ಆ ಬಳಿಕ 59 ಪೀಸ್ ಮಾಡಿ ಫ್ರಿಡ್ಜ್ನಲ್ಲಿ ಇರಿಸಿದ್ದೆ. ಆಕೆಯ ವರ್ತನೆಯಿಂದ ಬೇಸತ್ತು ಕೃತ್ಯ ಎಸಗಿದ್ದೇನೆ ಎಂದು ಬರೆದಿದ್ದಾನೆ.

ಆರೋಪಿ ರಂಜನ್ ಮೊದಲು ಮಹಾಲಕ್ಷ್ಮಿಯನ್ನ ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ಬಾತ್ ರೂಂನಲ್ಲಿ ಆಕೆ ದೇಹವನ್ನ ಪೀಸ್ ಪೀಸ್ ಮಾಡಿದ್ದ. ಬಳಿಕ ಫ್ರಿಡ್ಜ್ ಗೆ ಮೃತದೇಹ ತುಂಬಿದ್ದ. ಸಾಕ್ಷಿ ನಾಶಪಡಿಸಲು ಬಾತ್ ರೂಂ ಕ್ಲೀನ್ ಮಾಡಿದ್ದ ಎಂದು ತಿಳಿದುಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!