ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕುತ್ಲೂರು: ಕಾಲೇಜು ವಿದ್ಯಾರ್ಥಿನಿ ಮೇಲೆ ಹಲ್ಲೆ..!: ಬಟ್ಟೆ ಹರಿದು ಮಾನಹಾನಿ ಯತ್ನ: ಕೊಲೆ ಬೆದರಿಕೆ..!: ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಕುತ್ಲೂರು: ಕಾಲೇಜು ವಿದ್ಯಾರ್ಥಿನಿ ಮೇಲೆ ಹಲ್ಲೆ..!: ಬಟ್ಟೆ ಹರಿದು ಮಾನಹಾನಿ ಯತ್ನ: ಕೊಲೆ ಬೆದರಿಕೆ..!: ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ಕಾಲೇಜಿಗೆ ತೆರಳಿ ಹಿಂತಿರುಗುತ್ತಿದ್ದ ವೇಳೆ ವಿದ್ಯಾರ್ಥಿನಿಯನ್ನು ನಿರ್ಜನ ಪ್ರದೇಶದಲ್ಲಿ ತಡೆದು ಹಲ್ಲೆನಡೆಸಿ ಬಟ್ಟೆ ಹರಿದು ಮಾನಹಾನಿ ಮಾಡಿ ಕೊಲೆ ಬೆದರಿಕೆ ಹಾಕಿರುವ ಘಟನೆ ಕುತ್ಲೂರು ಗ್ರಾಮದಲ್ಲಿ ನಡೆದಿದೆ.

ಕಾಲೇಜ್ ಯುವತಿ ಹಾಗೂ ಸ್ಥಳೀಯ ನಿವಾಸಿ ಶಂಕರ ದೇವಾಡಿಗ ಎಂಬಾತ ಕೆಲದಿನಗಳಿಂದ ಅನ್ಯೋನ್ಯವಾಗಿದ್ದು, ಈ ವಿಚಾರ ಆಕೆಯ ತಾಯಿಗೆ ತಿಳಿದು ಆತನೊಂದಿಗೆ ಮಾತನಾಡದಂತೆ ಮಗಳಿಗೆ ಎಚ್ಚರಿಕೆ ನೀಡಿದ್ದರು. ಈ ಹಿನ್ನಲೆಯಲ್ಲಿ ವಿದ್ಯಾರ್ಥಿನಿ ಆತ ನಂಬರ್ ಅನ್ನು ಬ್ಲಾಕ್ ಮಾಡಿದ್ದಳು ಎನ್ನಲಾಗಿದೆ.

ಸೆ. 12 ರಂದು ಸಂಜೆ ಕಾಲೇಜು ಮುಗಿಸಿ ವಿಧ್ಯಾರ್ಥಿನಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ನಿರ್ಜನ ಪ್ರದೇಶದಲ್ಲಿ ಕಾದು ನಿಂತಿದ್ದ ಆರೋಪಿ ಶಂಕರ ದೇವಾಡಿಗ ಆಕೆಯ ಮೇಲೆ ದಾಳಿ ನಡೆಸಿ ಮೊಬೈಲ್ ಅನ್ನು ಕಸಿದುಕೊಂಡಿದ್ದಲ್ಲದೆ, ಅವಾಚ್ಯವಾಗಿ ನಿಂದಿಸಿ ಕಾಲಿನಿಂದ ತುಳಿದು ಹಲ್ಲೆ ನಡೆಸಿದ್ದಾನೆ. ಬಟ್ಟೆಯನ್ನು ಹರಿದು ಮಾನಕ್ಕೆ  ಕುಂದುಂಟು ಮಾಡಿದ್ದು, ನಾಳೆ ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಹಲ್ಲೆಗೆ ಒಳಗಾದ ವಿದ್ಯಾರ್ಥಿನಿ ವೇಣೂರು ಪೊಲೀಸರಿಗೆ ದೂರು ನೀಡಿದ್ದಾಳೆ.

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!