ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಇಂದು ನಡೆದ ಕ್ವಿನ್ ಸಿಟಿ ಯೋಜನೆಯ ಉದ್ಘಾಟನಾ ಸಮಾರಂಭದ ನಂತರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ. ನನ್ನ ರಾಜೀನಾಮೆ ಕೇಳುವ ಬಿಜೆಪಿ, ಜೆಡಿಎಸ್‌ನವರಿಗೆ ಯಾವುದೇ ನೈತಿಕತೆ ಇಲ್ಲ. ಗೋಧ್ರಾ ಹತ್ಯಾಕಾಂಡ ಸಮಯದಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಇಂದಿನ ಪ್ರಧಾನಿ ನರೇಂದ್ರ ಮೋದಿಯವರು ರಾಜೀನಾಮೆ ನೀಡಿದ್ದರಾ?, ಇಂದು ಮೋದಿ ರ‍್ಕಾರದ ಸಂಪುಟದಲ್ಲಿ ಕೇಂದ್ರ ಸಚಿವರಾಗಿರುವ ಹೆಚ್.ಡಿ.ಕುಮಾರಸ್ವಾಮಿ ಮೇಲೆ ಆರೋಪಗಳಿವೆಯಲ್ಲವೇ?, ಅವರು ಈಗ ಜಾಮೀನು ಮೇಲೆ ಇದ್ದಾರೆ. ಅವರು ರಾಜೀನಾಮೆ ನೀಡಿದ್ದಾರೆಯೇ? ಹಾಗಾದರೆ ಅವರಿಗೆ ಮುಜುಗರವಾಗುವುದಿಲ್ಲವೇ” ಎಂದಿದ್ದಾರೆ.
Home › “ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಗೋಧ್ರಾ ಹತ್ಯಾಕಾಂಡ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಿದ್ದಾರಾ?” ಮುಖ್ಯಮಂತ್ರಿ ಸಿದ್ದರಾಮಯ್ಯ