ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಜಿರೆ: ಮನೆಯಲ್ಲಿ ಜಾರಿಬಿದ್ದು ಗಂಭೀರ ಗಾಯಗೊಂಡಿದ್ದ ಶಿಕ್ಷಕಿ: ಚಿಕಿತ್ಸೆಗೆ ಸ್ಪಂದಿಸದೆ ಖಾಸಗಿ ಆಸ್ಪತ್ರೆಯಲ್ಲಿ ಸಾವು..!

ಉಜಿರೆ: ಮನೆಯಲ್ಲಿ ಜಾರಿಬಿದ್ದು ಗಂಭೀರ ಗಾಯಗೊಂಡಿದ್ದ ಶಿಕ್ಷಕಿ: ಚಿಕಿತ್ಸೆಗೆ ಸ್ಪಂದಿಸದೆ ಖಾಸಗಿ ಆಸ್ಪತ್ರೆಯಲ್ಲಿ ಸಾವು..!

ಉಜಿರೆ: ಮನೆಯಲ್ಲಿ ಜಾರಿಬಿದ್ದು ಗಂಭೀರ ಗಾಯಗೊಂಡಿದ್ದ ಶಿಕ್ಷಕಿ, ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು (ಸೆ.02)ಕೊನೆಯುಸಿರೆಳೆದಿದ್ದಾರೆ.

ಚಾರ್ಮಾಡಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಉಜಿರೆ ರಥಬೀದಿ ಸಮೀಪದ ನಿವಾಸಿ ಸುಪ್ರಭಾ ಪಿ.(40) ಅವರು ಆ.31ರಂದು ತಮ್ಮ ಮನೆಯಲ್ಲಿ ಜಾರಿಬಿದ್ದು ಗಂಭೀರ ಗಾಯಗೊಂಡಿದ್ದರು. ಈ ಹಿನ್ನಲೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮೃತರು ಪತಿ, ಇಬ್ಬರು ಪುತ್ರರನ್ನು, ಬಂಧುಬಳಗವನ್ನು ಹಾಗೂ ತಮ್ಮ ಪ್ರೀತಿಯ ಶಾಲಾ ಮಕ್ಕಳನ್ನು, ಸಹೋದ್ಯೋಗಿಗಳನ್ನು ಅಗಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!