ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಮ್ಮ ಬೈಕ್ ಕೊಡಿಸಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಯುವಕ..!

ಅಮ್ಮ ಬೈಕ್ ಕೊಡಿಸಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಯುವಕ..!

ಬೆಂಗಳೂರು: ಹರಿಹರೆಯದ ಯುವಕನೋರ್ವ ಬೈಕ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಥಣಿಸಂದ್ರದಲ್ಲಿ ಸೆ.11ರಂದು ನಡೆದಿದೆ.

ಬಿಎಸ್ಸಿ ಓದಿಕೊಂಡಿದ್ದ ತಮಿಳುನಾಡು ಮೂಲದ ಅಯ್ಯಪ್ಪ (20) ಎಂಬ ಯುವಕ ತಾಯಿಯ ಜೊತೆ ಬೈಕ್ ಕೊಡಿಸುವಂತೆ ಕೇಳಿಕೊಂಡಿದ್ದ. ಆದರೆ ಆತನ ತಾಯಿ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡು ಮಗನಿಗೆ ಎರಡನೇ ವರ್ಷದ ಬಿಎಸ್ಸಿ ವ್ಯಾಸಂಗ ಮಾಡಿಸುತ್ತಿದ್ದರು. ಸ್ಥಿತಿವಂತರಲ್ಲದ ಕಾರಣ ಬೈಕ್ ಕೊಡಿಸಲಾಗಲಿಲ್ಲ. ಇದರಿಂದ ಮನನೊಂದ ಯುವಕ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸೆ. 11 ರಂದು ಅಯ್ಯಪ್ಪ ಅವರ ತಾಯಿ ಸಂಜೆ ಕೆಲಸ ಮುಗಿಸಿ ಮನೆಗೆ ವಾಪಸ್ ಬಂದಾಗ ಮಗ ಆತ್ಮಹತ್ಯೆ ಮಾಡಿಕೊಂಡಿದ್ದ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಆಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಆಸ್ಪತ್ರೆಗೆ ರವಾನಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!