ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸಿಎಂಗೆ ಮುಡಾ ಸಂಕಷ್ಟ: ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜವಾಯ್ತಾ?: "ಕೃಷ್ಣನಿದ್ದ, ಭೀಮ ಗೆದ್ದ, ಇಲ್ಲಿ ಕೃಷ್ಣ ಇಲ್ಲ ದುರ್ಯೋಧನ ಗೆದ್ದ" ಎಂದಿದ್ದೇಕೆ?

ಸಿಎಂಗೆ ಮುಡಾ ಸಂಕಷ್ಟ: ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜವಾಯ್ತಾ?: "ಕೃಷ್ಣನಿದ್ದ, ಭೀಮ ಗೆದ್ದ, ಇಲ್ಲಿ ಕೃಷ್ಣ ಇಲ್ಲ ದುರ್ಯೋಧನ ಗೆದ್ದ" ಎಂದಿದ್ದೇಕೆ?

ಮುಡಾ ಹಗರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ತಂದಿಟ್ಟಿದೆ. ತನಿಖೆಗೆ, ರಾಜೀನಾಮೆಗೆ ಒತ್ತಡಗಳು ಹೆಚ್ಚಾಗುತ್ತಿದೆ. ಈ ಮಧ್ಯೆ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಕಳೆದ 4 ತಿಂಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಹೇಳಿದ ಮಾತು ನಿಜವಾಗುತ್ತಿದೆಯೇ ಎಂಬ ಅನುಮಾನ ಮೂಡುತ್ತಿದೆ. ಹಾಗಾದ್ರೆ ಸಿಎಂ ಎದುರಿಸುತ್ತಿರುವ ಮುಡಾ ಸಂಕಷ್ಟದ ಬಗ್ಗೆ ಸ್ವಾಮೀಜಿ ಏನಂದ್ರು?

“ಅಭಿಮನ್ಯುವಿನ ಬಿಲ್ಲಿನ ದಾರವನ್ನು ಮೋಸದಿಂದ ಕರ್ಣನ ಕೈಯಿಂದ ದಾರ ಕಟ್ ಮಾಡಿಸುತ್ತಾರೆ ಅಂತಾ ಹೇಳಿದ್ದೆ. ಮಹಾಭಾರತದಲ್ಲಿ ಕೃಷ್ಣನಿದ್ದ, ಭೀಮ ಗೆದ್ದ. ಇಲ್ಲಿ ಕೃಷ್ಣ ಇಲ್ಲ ದುರ್ಯೋಧನ ಗೆದ್ದ. ಅಭಿಮನ್ಯವಿನ ಹೆಂಡತಿ ರಣರಂಗ ಪ್ರವೇಶಿಸುತ್ತಾಳೆ ಎಂದಿದ್ದೆ ಈಗ ಏನಾಯ್ತು? ಬಿಲ್ಲಿನ ದಾರ ಕಟ್ ಮಾಡಿಸಿದರು. ಸಿದ್ದರಾಮಯ್ಯ ಜೀವನದಲ್ಲಿ ಎಂದಿಗೂ ಹೆಂಡತಿ ಹೊರಗೆ ಬಂದಿಲ್ಲ. ಪಾವಿತ್ರ‍್ಯತೆ ಇರುವ ಹೆಣ್ಣು ಮಗಳು. ಈಗ ಎಲ್ಲ ಕಡೆ ಅವರ ಹೆಸರು ಬಂತು” ಎಂದಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!