ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಜಿರೆಯಲ್ಲಿ ಬೃಹತ್ ವಿಶ್ವಹಿಂದೂ ಪರಿಷದ್ ಸಮಾವೇಶ: ವಿಶ್ವದ ಹಿಂದೂಗಳ ಧ್ವನಿ ವಿಶ್ವಹಿಂದೂ ಪರಿಷದ್:

ಉಜಿರೆಯಲ್ಲಿ ಬೃಹತ್ ವಿಶ್ವಹಿಂದೂ ಪರಿಷದ್ ಸಮಾವೇಶ: ವಿಶ್ವದ ಹಿಂದೂಗಳ ಧ್ವನಿ ವಿಶ್ವಹಿಂದೂ ಪರಿಷದ್:

 

 

 

ಬೆಳ್ತಂಗಡಿ: ತ್ಯಾಗ, ಬಲಿದಾನ, ಪ್ರತಿಭಟನೆ ಮತ್ತು ಹಿಂದೂ ಪರಿಷದ್ ವಿಶ್ವದ ಹಿಂದೂಗಳ ಧ್ವನಿ ಹಾಗೂ ಪ್ರತಿನಿಧಿಯಾಗಿದೆ ಎಂದು ಉಜಿರೆಯ ಶ್ರೀ ಜನಾರ್ದನಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ ಹೇಳಿದರು. ಅವರು ಭಾನುವಾರ ಉಜಿರೆಯಲ್ಲಿ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಥಬೀದಿಯಲ್ಲಿ ನಡೆದ ಬೃಹತ್ ಹಿಂದೂ ಸಮಾವೇಶದಲ್ಲಿ ಮಾತನಾಡಿದರು. ಹಿರಿಯ ಕಾರ್ಯಕರ್ತರ ಶ್ರಮದ ಫಲದಿಂದ ಸಂಘಟನೆ ಶಕ್ತಿಯುತವಾಗಿ ಬೆಳೆದಿದೆ. ದೇಶದಲ್ಲಿ ಹಿಂದೂಗಳಿಗೆ ಆಗುತ್ತಿರುವ ಅನ್ಯಾಯ ತಡೆಗಟ್ಟಬೇಕು. ಧರ್ಮ ಉಳಿದರೆ ಮಾತ್ರ ದೇಶ ಉಳಿಯುತ್ತದೆ ಎಂದು ಅವರು ಹೇಳಿದರು. ದಿಕ್ಸೂಚಿ ಭಾಷಣ ಮಾಡಿದ ಮಂಗಳೂರು ವಿಭಾಗದ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಹಿಂದೂ ಸಮಾಜದ ಮೇಲೆ ನಡೆಯುವ ರಾಜಕೀಯ ಮತ್ತು ಸಾಮಾಜಿಕ ದಾಳಿಯನ್ನು ಖಂಡಿಸಬೇಕು. ಜಾತಿ ವಿಚಾರದಲ್ಲಿ ಹಿಂದೂಸಮಾಜ ವಿಂಗಡಣೆಯಾಗಬಾರದು ಎಂದು ಅವರು ಹೇಳಿದರು.

 

 

ಸಮಾರಂಭವನ್ನು ಉದ್ಘಾಟಿಸಿದ ಉತ್ಸವಸಮಿತಿ ಅಧ್ಯಕ್ಷ ಡಾ. ಎಂ. ಎಂ. ದಯಾಕರ್ ಮಾತನಾಡಿ, ನಮ್ಮೊಳಗಿನ ಶಕ್ತಿ ಇನ್ನಷ್ಟು ಬಲಗೊಂಡು ನ್ಯಾಯಮಾರ್ಗದಲ್ಲಿ ಹೋರಾಟ ನಡೆಸಬೇಕು ಎಂದು ಸಲಹೆ ನೀಡಿದರು.

 

 

ನವೀನ್ ನೆರಿಯಾ, ಡಾ. ಭಾರತಿ, ಜಿ.ಕೆ., ಎಕ್ಸೆಲ್ ಕಾಲೇಜಿನ ಆಡಳಿತ ನಿರ್ದೇಶಕ ಸುಮಂತ್ ಕುಮಾರ್ ಜೈನ್, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮೊದಲಾದವರು ಉಪಸ್ಥಿತರಿದ್ದರು. 60 ಮಂದಿ ಹಿರಿಯ ಕಾರ್ಯಕರ್ತರನ್ನು ಗೌರವಿಸಲಾಯಿತು. ಸಂಪತ್ ಸುವರ್ಣ ಸ್ವಾಗತಿಸಿದರು. ಮೋಹನ್ ಬೆಳ್ತಂಗಡಿ ಧನ್ಯವಾದವಿತ್ತರು.

 

ಬೃಹತ್ ಶೋಭಾಯಾತ್ರೆ: ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಿಂದ ಶಾರದಾ ಮಂಟಪದ ವರೆಗೆ ನಡೆದ ಶೋಭಾಯಾತ್ರೆಯಲ್ಲಿ 60 ಕ್ಕಿಂತಲೂ ಭಜನಾತಂಡಗಳು, ನೂರಾರೂ ಬೈಕ್‌ಗಳು, ಕೃಷ್ಣವೇಷ, ಕೀಲುಕುದುರೆ ಭಾಗವಹಿಸಿದ್ದು ವಿಶೇಷ ಆಕರ್ಷಣೆಯಾಗಿ ಎಲ್ಲರ ಗಮನ ಸೆಳೆಯಿತು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!