ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಂಗಳೂರು: ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ನರ್ಸ್ ಗಳ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ..!

ಬೆಂಗಳೂರು: ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ನರ್ಸ್ ಗಳ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ..!

ಬೆಂಗಳೂರು: ಮತ್ತಿಕೆರೆ ರಸ್ತೆಯಲ್ಲಿರುವ ಎಂ ಎಸ್ ರಾಮಯ್ಯ ಆಸ್ಪತ್ರೆಯ 3ನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನರ್ಸ್ ಗಳ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.

ಆಸ್ಪತ್ರೆಯಲ್ಲಿ, ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಆಸ್ಪತ್ರೆಯ ಮೂರನೇ ಮಹಡಿಯಲ್ಲಿನ ಐಸಿಯುನಲ್ಲಿ ಇದ್ದಂತ ರೋಗಿಗಳನ್ನು ಕೂಡಲೇ ನರ್ಸ್ ಗಳು ಬೇರೆಡೆ ಶಿಫ್ಟ್ ಮಾಡಿದ್ದಾರೆ. ಈ ಮೂಲಕ ಐಸಿಯುನಲ್ಲಿದ್ದಂತ 7 ರೋಗಿಗಳ ಜೀವ ಕಾಪಾಡಿದ್ದಾರೆ.

ಅವಘಡದಲ್ಲಿ ಕೆಲ ನರ್ಸ್​ಗಳಿಗೆ ಸಣ್ಣಪುಟ್ಟ ಸುಟ್ಟ ಗಾಯವಾಗಿದೆ. ಘಟನ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುತ್ತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!