ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ - ಕಾಲೇಜಿನಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ - ಕಾಲೇಜಿನಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ - ಕಾಲೇಜು ನಿಟ್ಟಡೆ ಇಲ್ಲಿ ಸೆ.13ರಂದು ವಿಜೃಂಭಣೆಯಿAದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

10ನೇ ತರಗತಿಯ ವಿದ್ಯಾರ್ಥಿಗಳಿಂದ ಶಿಕ್ಷಕರಿಗೆ ಗುರುವಂದನೆ ನಡೆದು, ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳು ಕವನ ವಾಚಿಸುವ ಮೂಲಕ ಶಿಕ್ಷಕರ ಮಹತ್ವವನ್ನು ತಿಳಿಸಿದರು. ಶಿಕ್ಷಕರಿಗೆ ವಿದ್ಯಾರ್ಥಿಗಳು ವಿಭಿನ್ನ ರೀತಿಯ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನವನ್ನು ವಿತರಿಸಿದರು.

ಸಂಸ್ಥೆಯ ಸಂಸ್ಥಾಪಕರಾದ ಗಿರೀಶ್ ಕೆ.ಎಚ್ ಮಾತನಾಡಿ ‘ಮಕ್ಕಳ ಜೀವನ ಉಜ್ವಲವಾಗಲಿ’ ಎಂದು ಶುಭ ಹಾರೈಸಿದರು. ಶಾಲಾ ಸಂಚಾಲಕರಾದ ಅಶ್ವಿತ್ ಕುಲಾಲ್ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಓಮನ , ಹಿರಿಯ ಪ್ರಾಥಮಿಕ ಮುಖ್ಯೋಪಾಧ್ಯಾಯಿನಿ ಅಕ್ಷತ, ಕಿರಿಯ ಪ್ರಾಥಮಿಕ ಪವಿತ್ರ ಹಾಗೂ ಎಲ್ಲಾ ಶಿಕ್ಷಕ ವೃಂದದವರು, ಶಾಲಾ, ಕಾಲೇಜ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಹತ್ತನೇ ತರಗತಿಯ ವಿದ್ಯಾರ್ಥಿ ವರ್ಷಿತ ಮತ್ತು ದ್ವಿತೀಯ ಪಿಯುಸಿಯ ಸಿಂಚನ ಮತ್ತು ಸಮೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮ ಕೊನೆಗೆ ಸಿಹಿ ತಿಂಡಿ ವಿತರಿಸಲಾಯಿತು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!