ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ: ಛೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ : ವಾರ್ಷಿಕ ಮಹಾಸಭೆ: ನೂತನ ಅಧ್ಯಕ್ಷರಾಗಿ ರೋನಾಲ್ಡ್ ಲೋಬೊ: ಪ್ರಧಾನ ಕಾರ್ಯದರ್ಶಿಯಾಗಿ ಲ್ಯಾನ್ಸಿ ಎ ಪಿರೇರಾ

ಬೆಳ್ತಂಗಡಿ: ಛೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ : ವಾರ್ಷಿಕ ಮಹಾಸಭೆ: ನೂತನ ಅಧ್ಯಕ್ಷರಾಗಿ ರೋನಾಲ್ಡ್ ಲೋಬೊ: ಪ್ರಧಾನ ಕಾರ್ಯದರ್ಶಿಯಾಗಿ ಲ್ಯಾನ್ಸಿ ಎ ಪಿರೇರಾ

 

                                                                                 ರೋನಾಲ್ಡ್ ಲೋಬೋ,        ಲ್ಯಾನ್ಸಿ ಎ ಪಿರೇರಾ

 

ಬೆಳ್ತಂಗಡಿ: ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್  ಬೆಳ್ತಂಗಡಿ ಇದರ ವಾರ್ಷಿಕ ಮಹಾಸಭೆ ಸೆ.01ರಂದು ಬೆಳ್ತಂಗಡಿ ಸಿ.ವಿ.ಸಿ ಹಾಲ್‌ನಲ್ಲಿ ಜರಗಿತು.

ಛೇಂಬರ್ಸ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ ಅಧ್ಯಕ್ಷ  ಪುಷ್ಪರಾಜ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು, ಸಭೆಯಲ್ಲಿ  ಮುಂದಿನ 2 ವರ್ಷದ ಅವಧಿಗೆ ನೂತನ ಪಧಾದಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ರೋನಾಲ್ಡ್ ಲೋಬೊ, ಪ್ರಧಾನ ಕಾರ್ಯದರ್ಶಿಯಾಗಿ ಲ್ಯಾನ್ಸಿ ಎ ಪಿರೇರಾ, ಕೋಶಾಧಿಕಾರಿಯಾಗಿ ಸುನೀಲ್ ಶೆಣೈ ಉಪಾಧ್ಯಕ್ಷರಾಗಿ ಶಶಿಧರ ಪೈ ಆಯ್ಕೆಯಾದರು. ಹಾಗೂ 30 ಮಂದಿ ಸದಸ್ಯರನ್ನು ಆಡಳಿತ ಮಂಡಳಿಗೆ ಸದಸ್ಯರಾಗಿ ಆಯ್ಕೆ ಮಾಡಲಾಯಿತು.

 

 

ಈ ಸಂದರ್ಭದಲ್ಲಿ ಸಂಘದ ಆಡಳಿತ ಮಂಡಳಿಯ ಸದಸ್ಯರಾದ ಜಯಾನಂದ ಗೌಡ ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಅವರನ್ನು ಸಭೆಯಲ್ಲಿ ಗೌರವಿಸಲಾಯಿತು. ಸಂಘಟನೆಯ ಚಟುವಟಿಕೆಗಳ ಬಗ್ಗೆ ಹಾಗೂ ಹೆದ್ದಾರಿಯ ಕೆಲಸದ ರಸ್ತೆ ಅಗಲೀಕರಣದ ಸಂದರ್ಭದಲ್ಲಿ ವರ್ತಕರಿಗೆ ಆಗುವಂತಹ ತೊಂದರೆಗಳನ್ನು ಸಂಬAಧ ಪಟ್ಟ ಇಲಾಖೆಯ ಗಮನಕ್ಕೆ ತಂದು ಸರಿಪಡಿಸುವ ಬಗ್ಗೆ ಚರ್ಚಿಸಲಾಯಿತು.

ಪ್ರಧಾನ ಕಾರ್ಯದರ್ಶಿ ರೋನಾಲ್ಡ್ ಲೋಬೊ ವರದಿ ಮಂಡಿಸಿದರು. ಕೋಶಾಧಿಕಾರಿ ಸುನೀಲ್ ಶೆಣೈ ಲೆಕ್ಕ ಪತ್ರ ಮಂಡಿಸಿದರು. ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿ, ಜತೆ ಕಾರ್ಯದರ್ಶಿ ಯಶವಂತ ಪಟವರ್ಧನ್ ಮಹಾಸಭೆಯ ನೋಟಿಸು ಓದಿ ದಾಖಲಿಸಿದರು. ಸುಶೀಲಾ ಹೆಗ್ಡೆ ಪ್ರಾರ್ಥನೆ ಗೈದು ಲ್ಯಾನ್ಸಿ ಎ ಪಿರೇರಾ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!