ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ತಾಯಿಯನ್ನು ರಕ್ಷಿಸಿದ ಬಾಲಕಿಗೆ ಪೊಲೀಸ್ ಆಯುಕ್ತರಿಂದ ಸನ್ಮಾನ: ವೈಭವಿಯ ಸಮಯಪ್ರಜ್ಞೆಗೆ ಭಾರೀ ಶ್ಲಾಘನೆ

ತಾಯಿಯನ್ನು ರಕ್ಷಿಸಿದ ಬಾಲಕಿಗೆ ಪೊಲೀಸ್ ಆಯುಕ್ತರಿಂದ ಸನ್ಮಾನ: ವೈಭವಿಯ ಸಮಯಪ್ರಜ್ಞೆಗೆ ಭಾರೀ ಶ್ಲಾಘನೆ

ಮಂಗಳೂರು: ಕಿನ್ನಿಗೋಳಿಯ ರಾಮನಗರದಲ್ಲಿ ಸಂಭವಿಸಿದ ರಿಕ್ಷಾ ಅಪಘಾತದಲ್ಲಿ ತನ್ನ ತಾಯಿಯನ್ನು ಅಪಾಯದಿಂದ ಪಾರು ಮಾಡಿದ 7ನೇ ತರಗತಿ ಬಾಲಕಿ ವೈಭವಿ ಅವರ ಸಮಯಪ್ರಜ್ಞೆಗೆ ಭಾರೀ ಶ್ಲಾಘನೆ ವ್ಯಕ್ತವಾಗಿದ್ದು ಪೊಲೀಸ್ ಆಯುಕ್ತರು ಸನ್ಮಾನಿಸಿದ್ದಾರೆ.

ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ತಮ್ಮ ಕಚೇರಿಗೆ ಬಾಲಕಿಯನ್ನು ಕರೆಸಿ ಸನ್ಮಾನಿಸಿ ಆಕೆಯ ಧೈರ್ಯವನ್ನು ಶ್ಲಾಘಿಸಿ “ವೈಭವಿಯ ಈ ಪ್ರಜ್ಞೆ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ ಮಕ್ಕಳಿಗೆ ಇಂತಹ ಸಮಯ ಪ್ರಜ್ಞೆ ಮತ್ತು ಧೈರ್ಯ ಮೂಡಿ ಬರಬೇಕಿದೆ” ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಡಿಸಿಪಿಗಳಾದ ಸಿದ್ದಾರ್ಥ ಗೋಯೆಲ್, ದಿನೇಶ್ ಕುಮಾರ್ ಬಿ.ಪಿ., ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ, ಸಂಚಾರ ವಿಭಾಗದ ಇನ್‌ಸ್ಪೆಕ್ಟರ್‌ಗಳಾದ ಶರೀಫ್, ಹುಲುಗಪ್ಪ ಮತ್ತು ವೈಭವಿ ಪಾಲಕರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!