ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕೊಡಮಣಿತ್ತಾಯಿ ದೈವಸ್ಥಾನ ಅರಮಲೆಬೆಟ್ಟ : ಬ್ರಹ್ಮಕುಂಭಾಭಿಷೇಕ ಸಮಿತಿ ಅಧ್ಯಕ್ಷರಾಗಿ ಶಶಿಧರ್ ಶೆಟ್ಟಿ ಬರೋಡ, ಕಾರ್ಯಾಧ್ಯಕ್ಷರಾಗಿ ಸುಮಂತ್ ಕುಮಾರ್ ಜೈನ್ ಆಯ್ಕೆ:

ಕೊಡಮಣಿತ್ತಾಯಿ ದೈವಸ್ಥಾನ ಅರಮಲೆಬೆಟ್ಟ : ಬ್ರಹ್ಮಕುಂಭಾಭಿಷೇಕ ಸಮಿತಿ ಅಧ್ಯಕ್ಷರಾಗಿ ಶಶಿಧರ್ ಶೆಟ್ಟಿ ಬರೋಡ, ಕಾರ್ಯಾಧ್ಯಕ್ಷರಾಗಿ ಸುಮಂತ್ ಕುಮಾರ್ ಜೈನ್ ಆಯ್ಕೆ:

 

 

 

ಬೆಳ್ತಂಗಡಿ:ಕುವೆಟ್ಟು ಗ್ರಾಮದ ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯಿ ದೈವಸ್ಥಾನದಲ್ಲಿ ಪೆಬ್ರವರಿ ತಿಂಗಳಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕ ಕಾರ್ಯಕ್ರಮದ ಪೂರ್ವ ಸಿದ್ಧತೆಗಳ  ಸಭೆಯು ಆಡಳಿತ ಮೊಕ್ತೇಸರರಾದ ಸುಖೇಶ್ ಕುಮಾರ್ ಕಡಂಬು ಇವರ ಅಧ್ಯಕ್ಷತೆಯಲ್ಲಿ ಸೆ 10 ರಂದು ಅರಮಲೆ ಬೆಟ್ಟ ಕೊಡಮಣಿತ್ತಾಯಿ ದೈವಸ್ಥಾನದಲ್ಲಿ ನಡೆಯಿತು.ಸಭೆಯಲ್ಲಿ ಕುಂಭಾಭಿಷೇಕ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಉದ್ಯಮಿಗಳಾದ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಕಾರ್ಯಧ್ಯಕ್ಷರಾಗಿ ಸುಮಂತ್ ಕುಮಾರ್ ಜೈನ್, ಪ್ರಧಾನ ಕಾರ್ಯದರ್ಶಿಗಳಾಗಿ ಪುರಂದರ ಶೆಟ್ಟಿ ಪಾಡ್ಯಾರು, ಕೋಶಾಧಿಕಾರಿಯಾಗಿ ಪ್ರದೀಪ್ ಶೆಟ್ಟಿ ಶಕ್ತಿನಗರ, ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

 

 

 

ಅಧ್ಯಕ್ಷ ಶಶಿಧರ ಶೆಟ್ಟಿ ಮಾತನಾಡಿ ಅರಮಲೆ ಬೆಟ್ಟ ಕ್ಷೇತ್ರ ಬಹಳ ಕಾರಣೀಕ ಕ್ಷೇತ್ರವಾಗಿದ್ದು ,ಗ್ರಾಮಸ್ಥರು ಎಲ್ಲರೂ ಒಟ್ಟಾಗಿ ಸೇರಿ ನಮ್ಮ ಗ್ರಾಮದ ದೈವಸ್ಥಾನದ ಬ್ರಹ್ಮ ಕುಂಭಾಭಿಷೇಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು. ಗೋಪಾಲಕೃಷ್ಣ ತಂತ್ರಿ, ಜಯರಾಮ ಶೆಟ್ಟಿ ಪಡಂಗಡಿ, ಶುಭ ಹಾರೈಸಿದರು.ಸಂಪತ್ ಸುವರ್ಣ, ಸುಮಂತ್ ಜೈನ್ ಅನಿಸಿಕೆ ಹಂಚಿಕೊಂಡರು.ಈ ಸಂದರ್ಭದಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಧರಣೇಂದ್ರ ಜೈನ್ ನಿರೂಪಿಸಿದರು. ಪುರಂದರ ಶೆಟ್ಟಿ ಧನ್ಯವಾದವಿತ್ತರು.

 

ಇದನ್ನೂ ಓದಿ:

 

http://prajaprakasha.com/?p=30456

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!