ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಭೀಕರ ರಸ್ತೆ ಅಪಘಾತ : 10 ಮಂದಿ ದುರ್ಮರಣ: ಕಾರ್ಮಿಕರಿದ್ದ ಟ್ರ‍್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ…!

ಭೀಕರ ರಸ್ತೆ ಅಪಘಾತ : 10 ಮಂದಿ ದುರ್ಮರಣ: ಕಾರ್ಮಿಕರಿದ್ದ ಟ್ರ‍್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ…!

ಉತ್ತರಪ್ರದೇಶ: ಕಾರ್ಮಿಕರನ್ನು ತುಂಬಿದ್ದ ಟ್ರ‍್ಯಾಕ್ಟರ್ ಟ್ರಾಲಿಗೆ ನಿಯಂತ್ರಣ ತಪ್ಪಿದ ಟ್ರಕ್ ಡಿಕ್ಕಿ ಹೊಡೆದ ಘಟನೆ ವಾರಾಣಸಿ - ಪ್ರಯಾಗರಾಜ್ ರಾಷ್ಟ್ರೀಯ ಹೆದ್ದಾರಿಯ ಕಚ್ವಾನ್ ಪ್ರದೇಶದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.

ಭದೋಹಿ ಜಿಲ್ಲೆಯಿಂದ ಮೇಲ್ಛಾವಣಿಯನ್ನು ಎರಕಹೊಯ್ದ ನಂತರ ಎಲ್ಲ ಕಾರ್ಮಿಕರು ಟ್ರ‍್ಯಾಕ್ಟರ್ ಟ್ರಾಲಿಯಲ್ಲಿ ತಮ್ಮ ಮನೆಗಳಿಗೆ ಮರಳುತ್ತಿದ್ದರು. ಈ ಸಂದರ್ಭದಲ್ಲಿ ವೇಗವಾಗಿ ಬಂದ ಟ್ರಕ್, ಟ್ರ‍್ಯಾಕ್ಟರ್ ಟ್ರಾಲಿಗೆ ಹಿಂದಿನಿAದ ಡಿಕ್ಕಿ ಹೊಡೆದಿದೆ. ಪರಿಣಾಮ ಟ್ರ‍್ಯಾಕ್ಟರ್ ಟ್ರಾಲಿ ಪಲ್ಟಿಯಾಗಿದ್ದು 10 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 3 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪೊಲೀಸರು ಧಾವಿಸಿ ಗಾಯಾಳುಗಳನ್ನು ಆಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಮೃತಪಟ್ಟವರೆಲ್ಲರೂ ವಾರಾಣಸಿ ನಿವಾಸಿಗಳಾಗಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!